ನಾಳೆ ನಟ ಧ್ರುವ ಸರ್ಜಾ ಅವರ ಜನ್ಮದಿನವಾಗಿದ್ದು ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ. ಅವರ ಅಣ್ಣ ಚಿರಂಜೀವಿ ಸರ್ಜಾ ಅವರನ್ನು ಕಳೆದುಕೊಂಡಿದ್ದು, ಹಾಗೂ ಕೊರೊನಾ ಕಾರಣದಿಂದಾಗಿ ಅಭಿಮಾನಿಗಳಿಗೆ ನೀವು ಇರುವ ಕಡೆಯಿಂದಲೇ ಶುಭಹಾರೈಸಿ ಎಂದು ಧ್ರುವ ಸರ್ಜಾ ಟ್ವೀಟ್ ಮಾಡಿದ್ದಾರೆ.
ಅಭಿಮಾನಿಗಳೇ ನಮ್ ಅನ್ನದಾತರು. ನೀವೇ ನಮ್ಮ ಶಕ್ತಿ. ಪ್ರತಿವರ್ಷ ಹುಟ್ಟುಹಬ್ಬಕ್ಕೆ ನೀವು ನಮ್ಮ ಮನೆಗೆ ಬಂದು ತೋರಿಸೋ ಪ್ರೀತಿ, ಅಭಿಮಾನ ವರ್ಣನಾತೀತ. ಈ ವರ್ಷದ ಎಲ್ಲಾ ಬೆಳವಣಿಗೆಗಳು ನಿಮಗೆ ಗೊತ್ತಿರೋದೇ. ಎಲ್ಲೂ ಸಂಭ್ರಮವಿಲ್ಲ. ಅಭಿಮಾನಿಗಳನ್ನು ಮನೆಯ ಬಳಿ ಬರಬೇಡಿ ಎನ್ನಲು ಮನಸ್ಸಿಲ್ಲ. ನೀವು ಇರುವ ಕಡೆಯಿಂದಲೇ ಹಾರೈಸಿ. ಅದೇ ನನಗೆ ಶ್ರೀರಕ್ಷೆ. ಜೈ ಆಂಜನೇಯ ಎಂದು ಧ್ರುವ ಸರ್ಜಾ ತಮ್ಮ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.