![](https://kannadadunia.com/wp-content/uploads/2020/09/887276f9-cd08-4436-a2db-166f60016496.jpg)
ಬೆಂಗಳೂರು: ಅನಾರೋಗ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಸ್ಯಾಂಡಲ್ ವುಡ್ ನಟ ಶರಣ್ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.
ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದ ಶರಣ್ ನಿನ್ನೆ ಆಸ್ಪತ್ರೆಗೆ ದಾಖಲಾಗಿದ್ದರು. ಒಂದು ದಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಗುಣಮುಖರಾಗಿರುವ ಶರಣ್ ಇದೀಗ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಮನೆಗೆ ಮರಳಿದ್ದಾರೆ.
ನಿನ್ನೆ ಅವತಾರ ಪುರುಷ ಚಿತ್ರದ ಶೋಟಿಂಗ್ ವೇಳೆ ನಟ ಶರಣ್ ಅಸ್ವಸ್ಥರಾಗಿದ್ದರು. ಅವರಿಗೆ ತೀವ್ರ ಹೊಟ್ಟೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಶರಣ್ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ವೈದ್ಯರ ಸಲಹೆ ಮೇರೆಗೆ ಡಿಸ್ಚಾರ್ಜ್ ಆಗಿದ್ದಾರೆ ಎಂದು ತಿಳಿದುಬಂದಿದೆ.