alex Certify ಇಂದು ರಶ್ಮಿಕಾ ಮಂದಣ್ಣ ಜನ್ಮದಿನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಶ್ಮಿಕಾ ಮಂದಣ್ಣ ಜನ್ಮದಿನ

ನ್ಯಾಷನಲ್ ಕ್ರಶ್ ನಟಿ ರಶ್ಮಿಕಾ ಮಂದಣ್ಣ ಇಂದು ತಮ್ಮ 25ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2016 ರಲ್ಲಿ ರಕ್ಷಿತ್ ಶೆಟ್ಟಿ ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾದಲ್ಲಿ ಅಭಿನಯಿಸುವ ಮೂಲಕ ತಮ್ಮ ಸಿನಿಪಯಣ ಆರಂಭಿಸಿದರು. ಕನ್ನಡ, ತೆಲುಗು, ಹಿಂದಿ ಚಿತ್ರರಂಗದಲ್ಲಿ ಮಿಂಚುತ್ತಿರುವ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಬಾಲಿವುಡ್ ನ ಎರಡು ಚಿತ್ರಗಳನ್ನು ಕೈಗೆತ್ತಿಕೊಂಡಿದ್ದಾರೆ.

ಆನ್ಲೈನ್ ನಲ್ಲಿ ಶಾಪಿಂಗ್ ಮಾಡುವವರಿಗೆ ಖುಷಿ ಸುದ್ದಿ..! ಭರ್ಜರಿ ರಿಯಾಯಿತಿ ನೀಡ್ತಿದೆ ಈ ಬ್ಯಾಂಕ್

ಟಾಲಿವುಡ್ ನ ಸ್ಟಾರ್ ನಟರೊಂದಿಗೆ ನಟಿಸಿರುವ ರಶ್ಮಿಕಾ ಮಂದಣ್ಣ ಟಾಲಿವುಡ್ ನ ಬಹುಬೇಡಿಕೆಯ ನಟಿಯಾಗಿದ್ದಾರೆ. ಇತ್ತೀಚೆಗೆ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಜೊತೆ ‘ಪುಷ್ಪ’ ಚಿತ್ರದಲ್ಲಿ ಅಭಿನಯಿಸಿದ್ದಾರೆ.‌ ಇಂದು ರಶ್ಮಿಕಾ ಮಂದಣ್ಣ ಹುಟ್ಟುಹಬ್ಬದ ಪ್ರಯುಕ್ತ ಕಾಮನ್ ಡಿಪಿಯೊಂದನ್ನು ಬಿಡುಗಡೆ ಮಾಡಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಅಭಿಮಾನಿಗಳಿಂದ ಹಾಗೂ ಸಿನಿತಾರೆಯರಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...