alex Certify ಇಂದು ‘ರಾಬರ್ಟ್’ ಚಿತ್ರದ ‘ಜೈ ಶ್ರೀರಾಮ್’ ವಿಡಿಯೋ ಸಾಂಗ್ ರಿಲೀಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ‘ರಾಬರ್ಟ್’ ಚಿತ್ರದ ‘ಜೈ ಶ್ರೀರಾಮ್’ ವಿಡಿಯೋ ಸಾಂಗ್ ರಿಲೀಸ್

ಶಿವರಾತ್ರಿಯಂದು ಬಿಡುಗಡೆಯಾಗಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಸಿನಿಮಾ ಕೇವಲ 8 ದಿನಗಳಲ್ಲಿ 78.36 ಕೋಟಿ ಕಲೆಕ್ಷನ್ ಮಾಡುವ ಮೂಲಕ ಭರ್ಜರಿ ಪ್ರದರ್ಶನ ಕಾಣುತ್ತಿದೆ, ಈ ಚಿತ್ರದ ‘ಜೈ ಶ್ರೀರಾಮ್’ ಹಾಡಿನ ಲಿರಿಕಲ್ ವಿಡಿಯೋ ಈಗಾಗಲೇ 13 ಮಿಲಿಯನ್ ವೀಕ್ಷಣೆ ಕಂಡಿದೆ. ಇದೀಗ ಜೈ ಶ್ರೀರಾಮ್ ವಿಡಿಯೋ ಹಾಡನ್ನು ಇಂದು ಸಂಜೆ 4-05 ಕ್ಕೆ ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಿದ್ದಾರೆ.

ತರುಣ್ ಸುಧೀರ್ ನಿರ್ದೇಶನದ ಈ ಚಿತ್ರಕ್ಕೆ ಕನ್ನಡ ಹಾಗೂ ತೆಲುಗು ಪ್ರೇಕ್ಷಕರಿಂದ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ, ಈ ಸಿನಿಮಾದ ಎಲ್ಲಾ ಹಾಡುಗಳು ಯೂಟ್ಯೂಬ್ ಟ್ರೆಂಡಿಂಗ್ ನಲ್ಲಿವೆ. ಉಮಾಪತಿ ಶ್ರೀನಿವಾಸ್ ಗೌಡ ಈ ಸಿನಿಮಾಗೆ ಬಂಡವಾಳ ಹೂಡಿದ್ದು ಆಶಾ ಭಟ್ ನಾಯಕಿಯಾಗಿ ಅಭಿನಯಿಸಿದ್ದಾರೆ.

https://www.instagram.com/p/CMrcAnIFJAn/?utm_source=ig_web_copy_link

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...