alex Certify ಇಂದು ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇಂದು ರಿಯಲ್ ಸ್ಟಾರ್ ಉಪೇಂದ್ರ ಹುಟ್ಟುಹಬ್ಬ

ನಟ ಹಾಗೂ ನಿರ್ದೇಶಕರಾದ ರಿಯಲ್ ಸ್ಟಾರ್ ಉಪೇಂದ್ರ ಅವರು ಇಂದು 52ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 1992 ರಂದು ʼತರ್ಲೆ ನನ್ಮಗʼ ಸಿನಿಮಾವನ್ನು ನಿರ್ದೇಶನ ಮಾಡುವ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಉಪೇಂದ್ರ ನಂತರ 1998 ರಂದು ‘A’ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸಿದರು. ಬಳಿಕ ಸಾಕಷ್ಟು ಸಿನಿಮಾಗಳಲ್ಲಿ  ಉಪೇಂದ್ರ ನಟಿಸಿದ್ದಾರೆ.

ಉಪೇಂದ್ರ ಅವರ ಡೈರೆಕ್ಷನ್ ಅಂದ್ರೆ ಪ್ರೇಕ್ಷಕರಲ್ಲಿ ಕುತೂಹಲ ಹೆಚ್ಚಾಗಿರುತ್ತದೆ. ವಿಭಿನ್ನ ಆಲೋಚನೆ ಮಾಡುವ ಪ್ರತಿಭಾವಂತ ಎಂಬ ಹೆಗ್ಗಳಿಕೆ ಉಪೇಂದ್ರರವರಿಗಿದೆ. ತಮ್ಮ ಡಿಫರೆಂಟ್ ಸಿನಿಮಾಗಳ ಮೂಲಕ ಸಾಕಷ್ಟು ಅಭಿಮಾನಿಗಳ ಬಳಗ ಹೊಂದಿರುವ ಉಪೇಂದ್ರ 1968 ಸೆಪ್ಟೆಂಬರ್ 18ರಂದು ಜನಿಸಿದ್ದು ಇಂದು ತಮ್ಮ ಜನ್ಮದಿನದ ಸಂಭ್ರಮದಲ್ಲಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...