alex Certify ಇತಿಹಾಸದ ಪುಟ ಸೇರಿದ ಮೈಸೂರಿನ ‘ಶಾಂತಲ’ ಚಿತ್ರಮಂದಿರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಇತಿಹಾಸದ ಪುಟ ಸೇರಿದ ಮೈಸೂರಿನ ‘ಶಾಂತಲ’ ಚಿತ್ರಮಂದಿರ

ಸಿನಿಮಾ ಪ್ರಿಯರಿಗೆ ನೆಚ್ಚಿನ ಚಿತ್ರಮಂದಿರವಾಗಿದ್ದ ಮೈಸೂರಿನ ‘ಶಾಂತಲ’ ಚಿತ್ರಮಂದಿರ ಬುಧವಾರದಿಂದ ಶಾಶ್ವತವಾಗಿ ಬಾಗಿಲು ಮುಚ್ಚಿದೆ. ಕಳೆದ 46 ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದ ಈ ಚಿತ್ರಮಂದಿರ ಕುಟುಂಬ ಸಮೇತ ಸಿನಿಮಾ ನೋಡಬಹುದಾದ ಚಿತ್ರಮಂದಿರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಈ ಚಿತ್ರಮಂದಿರದಲ್ಲಿ ಮೊಟ್ಟಮೊದಲನೆಯದಾಗಿ ‘ಬಂಗಾರದ ಪಂಜರ’ ಸಿನಿಮಾ ಪ್ರದರ್ಶನಗೊಂಡಿದ್ದು, ಶಾಶ್ವತವಾಗಿ ಬಾಗಿಲು ಮುಚ್ಚುವ ಸಂದರ್ಭದಲ್ಲಿ ‘ಶಿವಾಜಿ ಸುರತ್ಕಲ್’ ಪ್ರದರ್ಶನವಾಗುತ್ತಿತ್ತು. ‘ಶಾಂತಲ’ ಚಿತ್ರಮಂದಿರದಲ್ಲಿ ತಮ್ಮ ಚಿತ್ರ ಬಿಡುಗಡೆಯಾಗಬೇಕೆಂಬುದು ಬಹುತೇಕ ನಿರ್ಮಾಪಕರು ಬಯಕೆಯಾಗಿತ್ತು.

ಇದೀಗ ಈ ಚಿತ್ರಮಂದಿರ ಇತಿಹಾಸದ ಪುಟ ಸೇರಿದ್ದು, ಟ್ರಸ್ಟ್ ಒಂದಕ್ಕೆ ಸೇರಿದ ಜಾಗದಲ್ಲಿ ನಿರ್ಮಾಣಗೊಂಡಿದ್ದ ಈ ಚಿತ್ರಮಂದಿರ ಈಗ ಟ್ರಸ್ಟ್ ನವರು ಜಾಗ ಬಿಟ್ಟುಕೊಡುವಂತೆ ಹೇಳಿರುವ ಹಿನ್ನೆಲೆಯಲ್ಲಿ ಶಾಶ್ವತವಾಗಿ ಮುಚ್ಚಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...