alex Certify ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕನ್ನಡತಿ ದೀಪಿಕಾ ಪಡುಕೋಣೆ…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಕನ್ನಡತಿ ದೀಪಿಕಾ ಪಡುಕೋಣೆ…!

ಸ್ಯಾಂಡಲ್ ವುಡ್ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ದೀಪಿಕಾ ಪಡುಕೋಣೆ ಈಗ ಬಾಲಿವುಡ್ ನಟಿಯರಲ್ಲಿ ಒಬ್ಬರು. ಸಹನಟ ರಣವೀರ್ ಸಿಂಗ್ ಜೊತೆ ವೈವಾಹಿಕ ಬದುಕಿಗೆ ಕಾಲಿಟ್ಟಿರುವ ಈ ನಟಿ ಈಗಲೂ ತಮ್ಮ ಬೇಡಿಕೆಯನ್ನು ಉಳಿಸಿಕೊಂಡಿದ್ದಾರೆ.

ಸದ್ಯ ಕೊರೊನಾ ಲಾಕ್ಡೌನ್ ನಿಂದಾಗಿ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದು, ಈ ಬಿಡುವಿನ ಸಮಯದಲ್ಲಿ ದೀಪಿಕಾ ಪಡುಕೋಣೆ ಸಾಮಾಜಿಕ ಜಾಲತಾಣಗಳ ಮೂಲಕ ತಮ್ಮ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದಾರೆ.

ಇದರ ಮಧ್ಯೆ ದೀಪಿಕಾ ಪಡುಕೋಣೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಮ್ ನಲ್ಲಿ ಬರೋಬ್ಬರಿ 50 ಮಿಲಿಯನ್ ಫಾಲೋವರ್ಸ್ ಹೊಂದುವ ಮೂಲಕ ಈ ಸಾಧನೆ ಮಾಡಿದ ಭಾರತದ ಮೂರನೇ ಸೆಲೆಬ್ರಿಟಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

ಇನ್ಸ್ಟಾಗ್ರಾಮ್ ಫಾಲೋವರ್ಸ್ ಗಳ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿಗೆ 67 ಮಿಲಿಯನ್ ಹಿಂಬಾಲಕರಿದ್ದರೆ, ದ್ವಿತೀಯ ಸ್ಥಾನದಲ್ಲಿರುವ ಪ್ರಿಯಾಂಕಾ ಚೋಪ್ರಾಗೆ 54 ಮಿಲಿಯನ್ ಫಾಲೋವರ್ ಗಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...