
ಪ್ರೇಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ‘ಏಕ್ ಲವ್ ಯಾ’ ಚಿತ್ರದ ಮೊದಲ ಹಾಡನ್ನು ಇಂದು ವ್ಯಾಲೆಂಟೆನ್ಸ್ ಡೇ ಪ್ರಯುಕ್ತ A2 ಮ್ಯೂಸಿಕ್ ಯುಟ್ಯೂಬ್ ನಲ್ಲಿ ರಿಲೀಸ್ ಮಾಡಲಾಗಿದೆ ಈ ಹಾಡಿಗೆ ಬಾಲಿವುಡ್ ಗಾಯಕ ಅರ್ಮಾನ್ ಮಲ್ಲಿಕ್ ಧ್ವನಿ ನೀಡಿದ್ದಾರೆ.
ನಟಿ ನಿಶ್ವಿಕಾ ನಾಯ್ಡು ಲೇಟೆಸ್ಟ್ ಫೋಟೋಶೂಟ್
ರಕ್ಷಿತಾ ಅವರ ಸಹೋದರ ರಾಣಾ ಈ ಸಿನಿಮಾದಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದು ರಿಷಾ ಹಾಗೂ ರಚಿತಾ ರಾಮ್ ಇಬ್ಬರು ನಾಯಕಿಯರು ನಟಿಸಿದ್ದಾರೆ. ಇಂದು ಬಿಡುಗಡೆಯಾಗಿರುವ ಈ ಹಾಡಿಗೆ ಸಿನಿ ಪ್ರೇಕ್ಷಕರು ಸಾಕಷ್ಟು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಕನ್ನಡ ಸೇರಿದಂತೆ ತೆಲುಗು, ತಮಿಳು, ಮಲೆಯಾಳಂನಲ್ಲಿ ಈ ಹಾಡನ್ನು ರಿಲೀಸ್ ಮಾಡಿದ್ದಾರೆ.