
ಈಗಾಗಲೇ ಸಾಕಷ್ಟು ನಿರೀಕ್ಷೆ ಹೆಚ್ಚಿಸಿರುವ ಪವನ್ ಕಲ್ಯಾಣ್ ನಟನೆಯ ‘ವಕೀಲ್ ಸಾಬ್’ ಚಿತ್ರವನ್ನು ಏಪ್ರಿಲ್ 9ರಂದು ಥಿಯೇಟರ್ ಗಳಲ್ಲಿ ಬಿಡುಗಡೆ ಮಾಡಲಾಗುತ್ತಿದೆ.
ವೇಣು ಶ್ರೀರಾಮ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದಲ್ಲಿ ನಿವೇತಾ ಥಾಮಸ್, ಅಂಜಲಿ, ಅನನ್ಯಾ ನಾಗಲ್ಲ ಸೇರಿ ಹಲವು ಕಲಾವಿದರು ಅಭಿನಯಿಸಿದ್ದು, ಶ್ರುತಿ ಹಾಸನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿರುವ ಈ ಸಿನಿಮಾದಲ್ಲಿ ಪವನ್ ಕಲ್ಯಾಣ್ ವಕೀಲನ ಪಾತ್ರದಲ್ಲಿ ನಟಿಸಿದ್ದಾರೆ.