alex Certify ‘ಕಸ್ತೂರಿ ಮಹಲ್’ ನಲ್ಲಿ ನಟಿ ಶಾನ್ವಿ ಶ್ರೀವಾಸ್ತವ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಕಸ್ತೂರಿ ಮಹಲ್’ ನಲ್ಲಿ ನಟಿ ಶಾನ್ವಿ ಶ್ರೀವಾಸ್ತವ

ಡಿಂಪಲ್ ಕ್ವೀನ್ ನಟಿ ರಚಿತಾ ರಾಮ್ ನಟಿಸುತ್ತಿದ್ದ ದಿನೇಶ್ ಬಾಬು ನಿರ್ದೇಶನದ ‘ಕಸ್ತೂರಿ ಮಹಲ್’ ಚಿತ್ರದಲ್ಲಿ ಇದೀಗ ನಟಿ ಶಾನ್ವಿ ಶ್ರೀವಾಸ್ತವ ಸೇರಿಕೊಂಡಿದ್ದಾರೆ. ರಚಿತಾ ರಾಮ್ ಸಾಕಷ್ಟು ಸಿನಿಮಾಗಳಲ್ಲಿ ನಟಿಸುತ್ತಿದ್ದು, ಈ ಸಿನಿಮಾದಿಂದ ದೂರ ಸರಿದಿದ್ದಾರೆ ಎಂಬ ಸುದ್ದಿ ಬಂದಿದೆ. ಅವರ ಬದಲು ಶಾನ್ವಿ ಶ್ರೀವಾಸ್ತವ ಅಭಿನಯಿಸುತ್ತಿದ್ದಾರೆ ಎಂದು ಹೇಳಲಾಗಿದೆ.

ಈ ಕುರಿತು ಶಾನ್ವಿ ಶ್ರೀವಾಸ್ತವ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ. ನನ್ನ ಮುಂದಿನ ಕನ್ನಡ ಚಿತ್ರ ಪ್ರಖ್ಯಾತ ನಿರ್ದೇಶಕರಾದ ದಿನೇಶ್ ಬಾಬು ಸರ್ ಅವರ ‘ಕಸ್ತೂರಿ ಮಹಲ್’ ಎಂದು ನಿಮ್ಮೆಲ್ಲರಿಗೂ ತಿಳಿಸಲು ನನಗೆ ಸಂತೋಷವಾಗುತ್ತಿದೆ. ನನ್ನ ಕನ್ನಡದ ಮೊದಲ ಚಿತ್ರದ ನಂತರ ಮತ್ತೊಮ್ಮೆ ಹಾರರ್ ಚಿತ್ರ ಮಾಡುತ್ತಿದ್ದು, ಇನ್ನೂ ಅನೇಕ ಅವಕಾಶಗಳ ನಿರೀಕ್ಷೆಯಲ್ಲಿದ್ದೇನೆ. ನಿಮ್ಮೆಲ್ಲರ ಬೆಂಬಲ ಪ್ರೋತ್ಸಾಹಕ್ಕೆ ಚಿರಋುಣಿ ಎಂದು ಶಾನ್ವಿ ಶ್ರೀವಾಸ್ತವ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...