ಕಿಚ್ಚ ಸುದೀಪ್, ಇಂದು 47ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬವನ್ನು ಅಭಿಮಾನಿಗಳೊಂದಿಗೆ ಅದ್ಧೂರಿಯಾಗಿ ಆಚರಿಸದೇ ಇರುವುದು ಬೇಸರ ತಂದಿದ್ದರೂ ಅವರ ಬಹು ನಿರೀಕ್ಷೆಯ ‘ಕೋಟಿಗೊಬ್ಬ 3’ ಸಿನಿಮಾದ ಟೀಸರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ಲಾಂಚ್ ಆಗುತ್ತಿರುವುದು ಅವರ ಅಭಿಮಾನಿಗಳಿಗೆ ಖುಷಿ ತಂದಿದೆ.
ಕಿಚ್ಚ ಸುದೀಪ್ ಅವರಿಗೆ ಅಭಿಮಾನಿಗಳು ಹಾಗೂ ಸಾಕಷ್ಟು ಸೆಲೆಬ್ರಿಟಿಗಳು ಹುಟ್ಟುಹಬ್ಬಕ್ಕೆ ಶುಭಾಶಯ ಕೋರಿದ್ದಾರೆ. ಸುದೀಪ್ ಅವರ ಮನೆ ಮುಂದೆ ಅಭಿಮಾನಿಗಳು ಕ್ಯೂ ನಿಂತು ವಿಶ್ ಮಾಡುವುದನ್ನು ಅವರ ಫ್ಯಾನ್ಸ್ ಗಳು ಮಿಸ್ ಮಾಡಿಕೊಂಡಿದ್ದಾರೆ.