alex Certify ’ಕೈ’ ಕೊಟ್ಟ ಮತ್ತೋರ್ವ ನಟಿ: ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಲೇಡಿ ಸೂಪರ್ ಸ್ಟಾರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

’ಕೈ’ ಕೊಟ್ಟ ಮತ್ತೋರ್ವ ನಟಿ: ನಾಳೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಲೇಡಿ ಸೂಪರ್ ಸ್ಟಾರ್

ಹೈದರಾಬಾದ್: ದಕ್ಷಿಣ ಭಾರತದ ಖ್ಯಾತ ನಟಿ ಖುಷ್ಬೂ ಇತ್ತೀಚೆಗಷ್ಟೇ ಕಾಂಗ್ರೆಸ್ ತೊರೆದು ಬಿಜೆಪಿಗೆ ಸೇರ್ಪಡೆಯಾದ ಬೆನ್ನಲ್ಲೇ ಇದೀಗ ದಿ ಲೇಡಿ ಸೂಪರ್ ಸ್ಟಾರ್ ಖ್ಯಾತಿಯ ನಟಿ ವಿಜಯಶಾಂತಿ ಕೂಡ ಕಾಂಗ್ರೆಸ್ ತೊರೆದಿದ್ದು, ಬಿಜೆಪಿ ಸೇರ್ಪಡೆ ಖಚಿತವಾಗಿದೆ.

ನಟಿ ವಿಜಯಶಾಂತಿ ನಾಳೆ ದೆಹಲಿಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ ಎಂದು ತಿಳಿದು ಬಂದಿದೆ. ಹಲವು ದಿನಗಳಿಂದ ಕಾಂಗ್ರೆಸ್ ನಿಂದ ದೂರವಿದ್ದ ವಿಜಯಶಾಂತಿ ಈಗಾಗಲೇ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

ವಿಜಯಶಾಂತಿ ಬಿಜೆಪಿ ಸೇರ್ಪಡೆ ತೀವ್ರ ಕುತೂಹಲ ಮೂಡಿಸಿದ್ದು, ಜಿಹೆಚ್ಎಂಸಿ (ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್) ಚುನಾವಣೆಯಲ್ಲಿ ಕೇಸರಿ ಪಾಳಯದಿಂದ ಪ್ರಮುಖ ಪಾತ್ರ ವಹಿಸುವ ನಿರೀಕ್ಷೆಯಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...