
ಮೈಸೂರು: ಕೊಲೆಗೆ ಸುಪಾರಿ ನೀಡಿದ ಆರೋಪದ ಹಿನ್ನೆಲೆಯಲ್ಲಿ ಕನ್ನಡದ ಖ್ಯಾತ ಗಾಯಕಿ ಅನನ್ಯಾ ಭಟ್ ತಂದೆಯವರನ್ನು ಪೊಲೀಸರು ಬಂಧಿಸಿದ್ದಾರೆ.
ಗಾಯಕಿ ಅನನ್ಯಾ ಭಟ್ ಅವರ ತಂದೆ ವಿಶ್ವನಾಥ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಂಸ್ಕೃತ ಪಾಠ ಶಾಲೆಯ ನಿವೃತ್ತ ಪ್ರಾಂಶುಪಾಲ ಪರಶಿವಮೂರ್ತಿ ಹತ್ಯೆಗೆ ಸುಪಾರಿ ನೀಡಿದ್ದರು ಎಂಬ ಆರೋಪ ಹಿನ್ನೆಲೆಯಲ್ಲಿ ವಿಶ್ವನಾಥ್ ಭಟ್ ಅವರನ್ನು ಬಂಧಿಸಲಾಗಿದೆ.
ವಿಶ್ವನಾಥ್ ಭಟ್ ಹಾಗೂ ಪರಶಿವಮೂರ್ತಿ ನಡುವೆ ಸಂಸ್ಕೃತ ಪಾಠಶಾಲೆ ವಿಚಾರಕ್ಕೆ ಸಂಬಂಧಿಸಿದಂತೆ ಮನಸ್ತಾಪವಿತ್ತು. ಪ್ರತಿ ತಿಂಗಳು ಸಂಬಳಕ್ಕಾಗಿ ಹಾಗೂ ಪಾಠಶಾಲೆ ಆಡಳಿತ ಮಂಡಳಿ ವಿಚಾರವಾಗಿ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ಕಾರಣಕ್ಕೆ ವಿಶ್ವನಾಥ್, 7 ಲಕ್ಷ ರೂ ಗೆ ಸುಪಾರಿ ನೀಡಿ, ಪರಶಿವಮೂರ್ತಿಯವರನ್ನು ಹತ್ಯೆ ಮಾಡಿಸಿದ್ದರು ಎಂದು ತಿಳಿದು ಬಂದಿದೆ.