alex Certify ಕ್ಯಾಮೆರಾ ಹಾಗೂ ತಮ್ಮ ನಡುವಿನ ಬಾಂಧವ್ಯ ಬಿಚ್ಚಿಟ್ಟ ಗೋಲ್ಡನ್ ಸ್ಟಾರ್ ಗಣೇಶ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕ್ಯಾಮೆರಾ ಹಾಗೂ ತಮ್ಮ ನಡುವಿನ ಬಾಂಧವ್ಯ ಬಿಚ್ಚಿಟ್ಟ ಗೋಲ್ಡನ್ ಸ್ಟಾರ್ ಗಣೇಶ್

ಚಿತ್ರೀಕರಣಕ್ಕೆ ಅವಕಾಶ ಕೊಟ್ಟ ಕೂಡಲೇ ಸಾಕಷ್ಟು ಸಿನಿಮಾಗಳ ಶೂಟಿಂಗ್ ನಡೆಯುತ್ತಲೇ ಇವೆ. ಚಿತ್ರಮಂದಿರ ಓಪನ್ ಮಾಡಲು ಕೂಡ ಈಗಾಗಲೇ ಅನುಮತಿ ನೀಡಿದ್ದು, ಇದೀಗ ಮಹೇಶ್ ಗೌಡ ನಿರ್ದೇಶನದ, ನಟ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯಿಸುತ್ತಿರುವ ‘ತ್ರಿಬಲ್ ರೈಡಿಂಗ್’ ಸಿನಿಮಾ ಚಿತ್ರತಂಡ ಕೂಡ ಶೂಟಿಂಗ್ ಗೆ ಸಜ್ಜಾಗಿದೆ.

ಈ ಸಂದರ್ಭದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಕ್ಯಾಮೆರಾ ಜೊತೆಗಿನ ಅವರ ಸ್ನೇಹ ಎಂತಹದ್ದು ಎಂದು ಸಾಮಾಜಿಕ ಜಾಲತಾಣವಾದ ಟ್ವಿಟ್ಟರ್ ನಲ್ಲಿ ಬರೆದುಕೊಂಡಿದ್ದಾರೆ.

ನನ್ನ ಆತನ ಜೊತೆಗಿನ ಸಂಬಂಧ ಈ ಜನ್ಮಕ್ಕೆ ದೇವರು ಕೊಟ್ಟ ವರವೇ ಇರಬೇಕು. ನಾ ನಕ್ಕಾಗ ನಕ್ಕು, ಅತ್ತಾಗ ಅತ್ತು, ನನ್ನನ್ನು ನಿಮಗೆ ಅದ್ಭುತವಾಗಿ ತೋರಿಸಿದ ಆ ಸಲುಗೆಗೆ ಅದಾವ ಕಣ್ಣು ತಗುಲಿತ್ತೋ. 6 ತಿಂಗಳ ಕಾಲ ದೂರಾಗಿ ಈಗ ಎದುರಾಗಿದ್ದೇವೆ. ಆತ ಬೇರಾರಲ್ಲ ಬದುಕಿನ ಭಾಗ “ಕ್ಯಾಮೆರಾ” “ತ್ರಿಬಲ್ ರೈಡಿಂಗ್” ಚಿತ್ರೀಕರಣ ಶುರು ನಿಮ್ಮ ಹಾರೈಕೆಯಿರಲಿ ಎಂದು ಗಣೇಶ್ ಬರೆದುಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...