ಡಾ. ರಾಜಕುಮಾರ್ – ವಿಷ್ಣುವರ್ಧನ್ ಅಭಿನಯದ ಗಂಧದ ಗುಡಿ ಸೇರಿದಂತೆ ಭಕ್ತ ಪ್ರಹ್ಲಾದ, ನಾ ನಿನ್ನ ಮರೆಯಲಾರೆ, ಸನಾದಿ ಅಪ್ಪಣ್ಣ, ಹುಲಿಯ ಹಾಲಿನ ಮೇವು, ಮೋಜುಗಾರ ಸೊಗಸುಗಾರ, ಆಟೋ ರಾಜ ಮೊದಲಾದ ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿದ್ದ ಖ್ಯಾತ ನಿರ್ದೇಶಕ ವಿಜಯ್ ವಿಧಿವಶರಾಗಿದ್ದಾರೆ.
ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ 84 ವರ್ಷದ ವಿಜಯ್ ರೆಡ್ಡಿ ಶುಕ್ರವಾರದಂದು ಚೆನ್ನೈನ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಪತ್ನಿ, ಇಬ್ಬರು ಪುತ್ರರು ಮತ್ತು ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ವಿಜಯ್ ರೆಡ್ಡಿ ಕನ್ನಡ ಸೇರಿದಂತೆ ತೆಲುಗು, ತಮಿಳು ಮತ್ತು ಹಿಂದಿಯಲ್ಲೂ ಹಲವು ಚಿತ್ರಗಳನ್ನು ನಿರ್ದೇಶಿಸಿದ್ದು, ಕಳೆದ ಕೆಲವು ವರ್ಷಗಳಿಂದ ಚಿತ್ರರಂಗದಿಂದ ದೂರವಿದ್ದ ಅವರು ಕುಟುಂಬದವರೊಂದಿಗೆ ಚೆನ್ನೈನಲ್ಲಿ ನೆಲೆಸಿದ್ದರು. ವಿಜಯ್ ರೆಡ್ಡಿ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ.