
ಸುನಿ ನಿರ್ದೇಶನದ ‘ಸಖತ್’ ಸಿನಿಮಾದ ಮೋಷನ್ ಪೋಸ್ಟರ್ ಅನ್ನು ಜುಲೈ 2 ರಂದು ಗೋಲ್ಡನ್ ಸ್ಟಾರ್ ಗಣೇಶ್ ಅವರ ಹುಟ್ಟುಹಬ್ಬದ ದಿನ ಬಿಡುಗಡೆ ಮಾಡಲಾಗುತ್ತಿದೆ.
ಈ ಸಿನಿಮಾದಲ್ಲಿ ಸುರಭಿ ನಾಯಕಿಯಾಗಿ ನಟಿಸಿದ್ದಾರೆ. ಇದಕ್ಕೂ ಮುಂಚೆ ಗೋಲ್ಡನ್ ಸ್ಟಾರ್ ಗಣೇಶ್ ಅವರ ಚಮಕ್ ಸಿನಿಮಾವನ್ನು ಸುನಿ ನಿರ್ದೇಶನ ಮಾಡಿದ್ದರು.
ಸಿನಿಮಾ ಉತ್ತಮ ಯಶಸ್ಸು ಕಂಡಿತ್ತು. ಇದೀಗ ಮತ್ತೊಂದು ಹಿಟ್ ಸಿನಿಮಾ ಮಾಡಲು ಈ ಜೋಡಿ ಸಜ್ಜಾಗಿದೆ.