ಬೆಂಗಳೂರು: ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಬೆನ್ನಲ್ಲೇ ಇದೀಗ ಅವರ ಸಹೋದರಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ. ಈ ಬಗ್ಗೆ ಸ್ವತಃ ಮಧು ಬಂಗಾರಪ್ಪ ಹೇಳಿಕೆ ನೀಡಿದ್ದರು.
ಇದರ ಬೆನ್ನಲ್ಲೇ ಇದೀಗ ನಟ ಶಿವರಾಜ್ ಕುಮಾರ್ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿದ್ದು, ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
JDS ಸಂಸದ ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್
ಆದರೆ ನಟ ಶಿವರಾಜ್ ಕುಮಾರ್ ನಾನು ರಾಜಕೀಯ ಮಾತನಾಡಲು ಹೋಗಿಲ್ಲ. ವೈಯಕ್ತಿಕ ವಿಚಾರಕ್ಕೆ ಭೇಟಿ ನೀಡಿದ್ದೆ. ಇನ್ನು ಮಧು ಬಂಗಾರಪ್ಪ ಯಾವ ಪಕ್ಷಕ್ಕೆ ಸೇರಿದರೂ ಅವರಿಗೆ ಒಳ್ಳೆಯದಾಗಬೇಕು ಅಷ್ಟೇ ಎಂದು ಹೇಳಿದ್ದಾರೆ.
ಒಟ್ಟಾರೆ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗುತ್ತಿರುವ ಬೆನ್ನಲ್ಲೇ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಮೂಡಲಿದೆಯೇ ಎಂಬುದನ್ನು ಕಾದುನೋಡಬೇಕಿದೆ.