
ಸ್ಯಾಂಡಲ್ ವುಡ್ ನ ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ‘ರಾಬರ್ಟ್’ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ ಸೇರಿದಂತೆ ಸಾಕಷ್ಟು ಗೆಳೆಯರು ಬೆಂಗಳೂರಿಂದ ಮಡಿಕೇರಿಗೆ ಬೈಕ್ ಸವಾರಿ ಹೊರಟ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿದ್ದವು.
ಇದೀಗ ರೆಸಾರ್ಟ್ ನಲ್ಲಿ ಸ್ನೇಹಿತರೊಂದಿಗೆ ಕ್ರಿಕೆಟ್ ಆಟವಾಡಿದ್ದು ದರ್ಶನ್ ಅಭಿಮಾನಿಗಳು ಈ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವ ಮೂಲಕ ಸಂಭ್ರಮಿಸುತ್ತಿದ್ದಾರೆ.
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಬಹುನಿರೀಕ್ಷೆಯ ‘ರಾಬರ್ಟ್’ ಚಿತ್ರವನ್ನು ತೆರೆ ಮೇಲೆ ನೋಡಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.