alex Certify ಚಾಲೆಂಜಿಂಗ್ ಸ್ಟಾರ್ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ನೋಡಲು ಮುಗಿಬಿದ್ದ ಅಭಿಮಾನಿಗಳು…!

ಕೊರೊನಾ ನಿಯಂತ್ರಣಕ್ಕೆ ದೇಶದಾದ್ಯಂತ ಲಾಕ್ಡೌನ್ ಜಾರಿಗೊಳಿಸಿದ್ದ ಕಾರಣ ಚಿತ್ರರಂಗದ ಚಟುವಟಿಕೆಗಳು ಸ್ಥಗಿತಗೊಂಡಿದ್ದವು. ಇದೀಗ ಲಾಕ್ಡೌನ್ ಸಡಿಲಿಕೆ ಮಾಡಿದ್ದರೂ ಸಹ ಚಿತ್ರರಂಗದ ಚಟುವಟಿಕೆಗಳು ಮಂದಗತಿಯಲ್ಲಿ ಸಾಗಿದೆ.

ಹೀಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್ಡೌನ್ ಜಾರಿಯಾಗಿದ್ದಾಗಿನಿಂದಲೂ ಮೈಸೂರಿನ ತಮ್ಮ ಫಾರ್ಮ್ ಹೌಸ್ ನಲ್ಲಿ ಕುಟುಂಬ ಹಾಗೂ ಸ್ನೇಹಿತರೊಂದಿಗೆ ಕಾಲ ಕಳೆಯುತ್ತಿದ್ದರು. ಈ ಸಂದರ್ಭದಲ್ಲಿನ ಹಲವು ಫೋಟೋ ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದವು.

ಅರಣ್ಯ ಇಲಾಖೆಯ ರಾಯಭಾರಿಯೂ ಆಗಿರುವ ದರ್ಶನ್, ನಟ ಚಿಕ್ಕಣ್ಣ ಮತ್ತಿತರ ಸ್ನೇಹಿತರೊಂದಿಗೆ ಶುಕ್ರವಾರದಂದು ಭದ್ರಾ ಅಭಯಾರಣ್ಯಕ್ಕೆ ಭೇಟಿ ನೀಡಿದ್ದು, ಅವರು ಆಗಮಿಸಿದ್ದ ಸುದ್ದಿ ತಿಳಿದ ಅಭಿಮಾನಿಗಳು ಅವರನ್ನು ನೋಡಲು ಶನಿವಾರ ಬೆಳಗ್ಗೆ ಅತಿಥಿಗೃಹದ ಮುಂದೆ ಮುಗಿಬಿದ್ದಿದ್ದರು. ತಮ್ಮ ನೆಚ್ಚಿನ ನಟನನ್ನು ನೋಡಿ ಪುಳಕಿತರಾದ ಅಭಿಮಾನಿಗಳು ಸೆಲ್ಫಿ ತೆಗೆಸಿಕೊಂಡು ಕೈಕುಲುಕಿ ಸಂಭ್ರಮಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...