
ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹುನಿರೀಕ್ಷಿತ ‘ರಾಬರ್ಟ್’ ಚಿತ್ರ ಇಂದು ಬಿಡುಗಡೆಯಾಗಿದೆ. ಈ ಚಿತ್ರಕ್ಕಾಗಿ ಜಾತಕ ಪಕ್ಷಿಗಳಂತೆ ಕಾಯುತ್ತಿದ್ದ ಅಭಿಮಾನಿಗಳು ಕಳೆದ ರಾತ್ರಿಯಿಂದಲೇ ಚಿತ್ರಮಂದಿರಗಳ ಬಳಿ ಬೀಡು ಬಿಟ್ಟಿದ್ದರು. ತಮ್ಮ ನೆಚ್ಚಿನ ನಟನ ‘ರಾಬರ್ಟ್’ ಚಿತ್ರ ಈಗ ಬಿಡುಗಡೆಯಾಗಿರುವುದು ಸಹಜವಾಗಿಯೇ ಅಭಿಮಾನಿಗಳಲ್ಲಿ ಹರ್ಷ ಮೂಡಿಸಿದೆ.
‘ರಾಬರ್ಟ್’ ಚಿತ್ರದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ನಾಯಕಿಯಾಗಿ ಆಶಾ ಭಟ್ ಕಾಣಿಸಿಕೊಂಡಿದ್ದು, ಅವರ ಕುರಿತು ಒಂದಷ್ಟು ಮಾಹಿತಿ ಇಲ್ಲಿದೆ. ಭದ್ರಾವತಿಯ ಸುಬ್ರಹ್ಮಣ್ಯ ಹಾಗೂ ಶಾಮಲಾ ಭಟ್ ದಂಪತಿಯ ಎರಡನೇ ಪುತ್ರಿಯಾಗಿರುವ ಆಶಾ ಭಟ್, ಸೇಂಟ್ ಚಾರ್ಲ್ಸ್ ಕಾನ್ವೆಂಟ್ನಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿದ್ದಾರೆ. ಬಳಿಕ ಮೂಡಬಿದಿರೆಯ ಆಳ್ವಾಸ್ ಕಾಲೇಜಿನಲ್ಲಿ ವ್ಯಾಸಂಗ ಮುಂದುವರಿಸಿ ನಂತರ ಬೆಂಗಳೂರಿನ ಪ್ರತಿಷ್ಠಿತ ಆರ್.ವಿ. ಕಾಲೇಜಿನಲ್ಲಿ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ ನಲ್ಲಿ ಪದವಿ ಪಡೆದುಕೊಂಡಿದ್ದಾರೆ.
‘ಹೀರೋ’ ಚಿತ್ರದ ಮತ್ತೊಂದು ಲಿರಿಕಲ್ ಸಾಂಗ್ ರಿಲೀಸ್
2019ರಲ್ಲಿ ಬಾಲಿವುಡ್ ನ ‘ಜಂಗ್ಲಿ’ ಚಿತ್ರದ ದ್ವಿತೀಯ ನಾಯಕಿಯಾಗಿ ಅಭಿನಯಿಸುವ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಆಶಾ ಭಟ್, ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ‘ರಾಬರ್ಟ್’ ಚಿತ್ರದಲ್ಲಿ ಪೂರ್ಣ ಪ್ರಮಾಣದ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಕಲೆ, ಸಂಸ್ಕೃತಿ ಹಾಗೂ ಸಾಹಸಮಯ ಚಟುವಟಿಕೆಗಳಲ್ಲೂ ಸಕ್ರಿಯರಾಗಿರುವ ಆಶಾ ಭಟ್ 2014ರಲ್ಲಿ ‘ಮಿಸ್ ಸುಫ್ರಾ ಇಂಟರ್ನ್ಯಾಷನಲ್’ ಸುಂದರಿಯಾಗಿ ಆಯ್ಕೆಯಾಗಿದ್ದರು.