alex Certify ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರ ಕೃಷಿ ಸಚಿವ ಬಿ.ಸಿ. ಪಾಟೀಲ್ ಬ್ಯಾಟಿಂಗ್…! | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಲೆಂಜಿಂಗ್ ಸ್ಟಾರ್ ದರ್ಶನ್ ಪರ ಕೃಷಿ ಸಚಿವ ಬಿ.ಸಿ. ಪಾಟೀಲ್ ಬ್ಯಾಟಿಂಗ್…!

ಬೆಂಗಳೂರು: ನಟ ದರ್ಶನ್ ಬಹಳ ಒಳ್ಳೆಯ ವ್ಯಕ್ತಿ. ಕಷ್ಟಪಟ್ಟು ಬೆಳೆದು ಈ ಮಟ್ಟಕ್ಕೆ ಬಂದಿದ್ದಾರೆ. ಅವರ ಮೇಲೆ ಅನಗತ್ಯ ಆರೋಪ ಮಾಡಿ ತೇಜೋವಧೆಗೆ ಯತ್ನಿಸಲಾಗುತ್ತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿಳಿಸಿದ್ದಾರೆ.

ದರ್ಶನ್ ವಿರುದ್ಧ ಹಲ್ಲೆ ಆರೋಪಗಳು ಕೇಳಿಬರುತ್ತಿರುವ ಹಿನ್ನೆಲೆಯಲ್ಲಿ ಅವರನ್ನು ಕೃಷಿ ರಾಯಭಾರಿ ಸ್ಥಾನದಿಂದ ತೆಗೆಯಬೇಕು ಎಂಬ ಆಗ್ರಹಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೃಷಿ ಇಲಾಖೆ ರಾಯಭಾರಿ ಸ್ಥಾನದಿಂದ ದರ್ಶನ್ ಅವರನ್ನು ಕೈಬಿಡುವ ಪ್ರಶ್ನೆಯೇ ಇಲ್ಲ. ದರ್ಶನ್ ಅವರ ತೇಜೋವಧೆ ಮಾಡುವ ಪ್ರಯತ್ನ ನಡೆದಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದರು.

ಮೊಬೈಲ್ ಬ್ಯಾಟರಿ ಸ್ಫೋಟ; ಬಾಲಕನ ಬೆರಳುಗಳೇ ಕಟ್…!

ಇನ್ನು ತಲೆ ತೆಗೆಯುವೆ ಎಂಬ ದರ್ಶನ್ ಹೇಳಿಕೆಗೆ ಪ್ರತಿಕ್ರಿಯಿಸಿದ ಬಿ.ಸಿ. ಪಾಟೀಲ್, ಅವರು ಯಾರನ್ನು ಉದ್ದೇಶಿಸಿ ಅಥವಾ ಗಮನದಲ್ಲಿಟ್ಟುಕೊಂಡು ಹಾಗೇ ಹೇಳಿದ್ದಲ್ಲ. ಆ ಸಂದರ್ಭದಲ್ಲಿ ಒತ್ತಡದಿಂದ ಕೆಲ ಮಾತುಗಳು ಬಂದಿರುತ್ತವೆ ಅಷ್ಟೇ ಎಂದು ಸಮರ್ಥಿಸಿಕೊಂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...