
ಆತ್ಮಹತ್ಯೆಗೆ ಶರಣಾದ ಬಾಲಿವುಡ್ ಚಿತ್ರರಂಗದ ಪ್ರತಿಭಾವಂತ ನಟ ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ತನಿಖೆ ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಸುಶಾಂತ್ ಸಿಂಗ್ ಗೆಳತಿ ರಿಯಾ ಚಕ್ರವರ್ತಿ ವಿರುದ್ಧ ದೂರು ನೀಡಿರುವ ಹಿನ್ನೆಲೆಯಲ್ಲಿ ಪಾಟ್ನಾ ಪೊಲೀಸರು ಅವರ ವಿಚಾರಣೆಗೆ ಮುಂದಾಗಿದ್ದಾರೆ.
ತಮ್ಮ ದೂರಿನಲ್ಲಿ ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಹಲವು ಮಾಹಿತಿಗಳನ್ನು ಉಲ್ಲೇಖಿಸಿದ್ದು, ಚಿತ್ರರಂಗದ ಕುರಿತು ಬೇಸರ ಹೊಂದಿದ್ದ ತಮ್ಮ ಪುತ್ರ, ಕರ್ನಾಟಕದ ಕೊಡಗಿನಲ್ಲಿ ಜಮೀನು ಖರೀದಿಸಿ ಕೃಷಿಯಲ್ಲಿ ತೊಡಗಿಕೊಳ್ಳಲು ಬಯಸಿದ್ದ ಎಂದು ತಿಳಿಸಿದ್ದಾರೆ.
ಹೀಗಾಗಿ ಸುಶಾಂತ್ ಸಿಂಗ್ ಅವರ ಸ್ನೇಹಿತ ಮಹೇಶ್ ಶೆಟ್ಟಿ, ಕೊಡಗಿನ ಹಲವು ರಿಯಲ್ ಎಸ್ಟೇಟ್ ಏಜೆಂಟರನ್ನು ಸಂಪರ್ಕಿಸಿ ಗೋಣಿಕೊಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕೆಲವು ಜಮೀನುಗಳ ಪರಿಶೀಲನೆ ನಡೆಸಿದ್ದರು ಎಂದು ಹೇಳಲಾಗಿದೆ.