
ವೇಣು ಶ್ರೀರಾಮ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘ವಕೀಲ್ ಸಾಬ್’ ಚಿತ್ರದ ಟೀಸರ್ ಅನ್ನು ಇದೇ ತಿಂಗಳು ಜನವರಿ 14 ರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಬಿಡುಗಡೆ ಮಾಡಲಿದ್ದಾರೆ.
ಈಗಾಗಲೇ ಈ ಸಿನಿಮಾ ಶೂಟಿಂಗ್ ಕಂಪ್ಲೀಟ್ ಮಾಡಿರುವ ಚಿತ್ರತಂಡ ಪೋಸ್ಟ್ ಪ್ರೊಡಕ್ಷನ್ ಕೆಲಸಕ್ಕೆ ಸಜ್ಜಾಗಿದ್ದಾರೆ. ಶ್ರುತಿ ಹಾಸನ್ ಈ ಚಿತ್ರದಲ್ಲಿ ನಾಯಕಿಯಾಗಿ ನಟಿಸಿದ್ದು, ಈ ಚಿತ್ರವನ್ನು ತೆರೆ ಮೇಲೆ ನೋಡಲು ಪವನ್ ಕಲ್ಯಾಣ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ಇತ್ತೀಚೆಗಷ್ಟೇ ಈ ಸಿನಿಮಾದ ಹೊಸ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದ್ದರು. ಇದೀಗ ಈ ಚಿತ್ರದ ಟೀಸರ್ ಅನ್ನು ಜನವರಿ 14 ಸಂಜೆ 6.03ಕ್ಕೆ ರಿಲೀಸ್ ಮಾಡುತ್ತಿದ್ದಾರೆ.