alex Certify ಟ್ರಾಕ್ಟರ್ ಖರೀದಿಸಿ ಸ್ವತಃ ಚಾಲನೆ ಮಾಡಿದ ‘ಚಾಲೆಂಜಿಂಗ್ ಸ್ಟಾರ್’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟ್ರಾಕ್ಟರ್ ಖರೀದಿಸಿ ಸ್ವತಃ ಚಾಲನೆ ಮಾಡಿದ ‘ಚಾಲೆಂಜಿಂಗ್ ಸ್ಟಾರ್’

ಚಾಲೆಂಜಿಂಗ್ ಸ್ಟಾರ್ ದರ್ಶನ್ ಲಾಕ್ ಡೌನ್ ಅವಧಿಯಲ್ಲಿ ಮೈಸೂರಿನಲ್ಲಿರುವ ತಮ್ಮ ಫಾರ್ಮ್ ಹೌಸ್ ಸೇರಿಕೊಂಡಿದ್ದಾರೆ. ಕೃಷಿ ಕ್ಷೇತ್ರದಲ್ಲಿ ಅಪಾರ ಆಸಕ್ತಿ ಹೊಂದಿರುವ ಅವರು ಈ ನಿಟ್ಟಿನಲ್ಲಿ ತಮ್ಮ ಸಮಯ ವಿನಿಯೋಗಿಸುತ್ತಿದ್ದಾರೆ.

ಜೊತೆಗೆ ಪ್ರಾಣಿಪ್ರಿಯರಾಗಿರುವ ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲಿ ಹಲವು ಪ್ರಾಣಿಗಳನ್ನು ಸಾಕಿಕೊಂಡಿದ್ದಾರೆ. ಇತ್ತೀಚೆಗೆ ಹಸುಗಳಿಗಾಗಿ ದರ್ಶನ್ ಮೇವು ಕತ್ತರಿಸುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು.

ಇದೀಗ ಕೃಷಿ ಚಟುವಟಿಕೆಗಳಾಗಿ ಟ್ರ್ಯಾಕ್ಟರ್ ಒಂದನ್ನು ಖರೀದಿಸಿರುವ ಚಾಲೆಂಜಿಂಗ್ ಸ್ಟಾರ್, ಸ್ವತಃ ತಾವೇ ಅದನ್ನು ಚಲಾಯಿಸುವ ಮೂಲಕ ಟೆಸ್ಟ್ ಡ್ರೈವ್ ಮಾಡಿದ್ದಾರೆ. ಇದರ ಫೋಟೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...