
ಖಾದರ್ ಕುಮಾರ್ ನಿರ್ದೇಶಿಸುತ್ತಿರುವ ಪ್ರಜ್ವಲ್ ದೇವರಾಜ್ ನಟನೆಯ ‘ವೀರಂ’ ಚಿತ್ರದ ಶೂಟಿಂಗ್ ಅನ್ನು ಡಿಸೆಂಬರ್ 6ರಿಂದ ಶುರು ಮಾಡಲು ಚಿತ್ರತಂಡ ಸಜ್ಜಾಗುತ್ತಿದೆ.
ದಿಶಾ ಎಂಟರ್ ಟೈನ್ಮೆಂಟ್ ಸಂಸ್ಥೆ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದು, ಈ ಸಿನಿಮಾದಲ್ಲಿ ರಚಿತಾ ರಾಮ್ ನಾಯಕನಟಿಯಾಗಿ ಅಭಿನಯಿಸುತ್ತಿದ್ದಾರೆ.
ಈ ಸಿನಿಮಾ ಬಗ್ಗೆ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದ್ದು, ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಕೂಡ ಅಭಿನಯಿಸುತ್ತಾರೆ ಎಂದು ಹೇಳಲಾಗಿದೆ.