alex Certify ‘ಡಿ’ ಬಾಸ್ ಹುಟ್ಟುಹಬ್ಬ: ದರ್ಗಾಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಭಿಮಾನಿಗಳು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಡಿ’ ಬಾಸ್ ಹುಟ್ಟುಹಬ್ಬ: ದರ್ಗಾಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅಭಿಮಾನಿಗಳು

ಬೆಂಗಳೂರು: ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಂದರೆ ಅಭಿಮಾನಿಗಳಿಗೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಇಂದು ಡಿ ಬಾಸ್ ಅವರ ಹುಟ್ಟುಹಬ್ಬ. ಆದರೆ ಕೊರೊನಾ ಹಿನ್ನೆಲೆಯಲ್ಲಿ ಈ ಬಾರಿ ದರ್ಶನ್ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ. ತಮ್ಮ ನೆಚ್ಚಿನ ನಟನ ಜನ್ಮದಿನ ಹಿನ್ನೆಲೆಯಲ್ಲಿ ಹಿಂದೂ ಅಭಿಮಾನಿಗಳು ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಿದರೆ, ಇನ್ನೊಂದೆಡೆ ಮುಸ್ಲಿಂ ಅಭಿಮಾನಿಗಳು ದರ್ಗಾದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಕೊರೊನಾ ಕಾರಣದಿಂದ ಈ ಬಾರಿ ತಮ್ಮ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಮನೆಯ ಬಳಿ ಬರಬೇಡಿ ಎಂದು ದರ್ಶನ್ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಮುಸ್ಲಿಂ ಅಭಿಮಾನಿಗಳು ಗಜೇಂದ್ರಗಢದ ದರ್ಗಾಗೆ ತೆರಳಿ ಹೂವಿನ ಚಾದರ ಹಾಕಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಅಲ್ಲದೇ ದರ್ಶನ್ ಅವರ ಮುಂಬರುವ ರಾಬರ್ಟ್ ಚಿತ್ರದ ಯಶಸ್ಸಿಗಾಗಿ ಪೋಸ್ಟರ್ ಹಿಡಿದು ಪ್ರಾರ್ಥಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...