ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ವಶದಲ್ಲಿರುವ ನಟಿ ಸಂಜನಾ ಗಲ್ರಾಣಿ ಅವರ ಸಿಸಿಬಿ ಕಸ್ಟಡಿ ಅವಧಿ ಇಂದು ಅಂತ್ಯವಾಗಲಿದ್ದು, ಕೋರ್ಟ್ ಮುಂದೆ ಹಾಜರಾಗಲಿದ್ದಾರೆ.
ಸಂಜೆ ನಾಲ್ಕು ಗಂಟೆಗೆ ನಟಿ ಸಂಜನಾ ಅವರನ್ನು ಸಿಸಿಬಿ ಅಧಿಕಾರಿಗಳು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರು ಪಡಿಸಲಿದ್ದಾರೆ. ಸಿಸಿಬಿ ಕಸ್ಟಡಿ ಮುಗಿದಿರುವುದರಿಂದ ನ್ಯಾಯಾಲಯ ಸಂಜನಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆ ದಟ್ಟವಾಗಿದೆ.
ಈ ಹಿನ್ನಲೆಯಲ್ಲಿ ಸಿಸಿಬಿ ಅಧಿಕಾರಿಗಳು ಸಂಜನಾರ ಕೊನೇ ಹಂತದ ವಿಚಾರಣೆ ನಡೆಸುತ್ತಿದ್ದಾರೆ.