alex Certify ತಮ್ಮನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು ಚಿರಂಜೀವಿ ಸರ್ಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತಮ್ಮನ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು ಚಿರಂಜೀವಿ ಸರ್ಜಾ

ನಟ ಚಿರಂಜೀವಿ ಸರ್ಜಾ ತಮ್ಮ 39 ನೇ ವಯಸ್ಸಿನಲ್ಲಿ ಬಾರದ ಲೋಕಕ್ಕೆ ತೆರಳುವ ಮೂಲಕ ಕನ್ನಡ ಚಿತ್ರರಂಗವನ್ನು ಬಡವಾಗಿಸಿದ್ದಾರೆ. ಚಿರಂಜೀವಿ ಸರ್ಜಾ ಅವರ ಹಠಾತ್ ನಿಧನ ಚಿತ್ರರಂಗದ ಮಂದಿ ಮಾತ್ರವಲ್ಲ ಅಭಿಮಾನಿಗಳಿಗೂ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಚಿರಂಜೀವಿ ಸರ್ಜಾ ಅವರ ಕುಟುಂಬ ಚಿತ್ರರಂಗಕ್ಕೆ ತಮ್ಮ ಜೀವನವನ್ನು ಮುಡುಪಾಗಿಟ್ಟಿದ್ದರು. ಚಿರಂಜೀವಿ ಅವರ ತಾತ ಶಕ್ತಿಪ್ರಸಾದ್ ಕನ್ನಡ ಚಿತ್ರರಂಗದ ಹಿರಿಯ ನಟ. ಮಾವ ಅರ್ಜುನ್ ಸರ್ಜಾ ಭಾರತೀಯ ಚಿತ್ರರಂಗದಲ್ಲಿ ತಮ್ಮದೇ ಆದ ಛಾಪನ್ನು ಮೂಡಿಸಿದ್ದರು.

ಇನ್ನು ಸಹೋದರ ಧ್ರುವ ಸರ್ಜಾ ಕೂಡಾ ಚಿತ್ರರಂಗದಲ್ಲಿ ಗುರುತಿಸಿಕೊಂಡಿದ್ದರು. ಚಿರಂಜೀವಿ ಸರ್ಜಾ ಮದುವೆಯಾಗಿದ್ದು ನಟಿ ಮೇಘನಾ ರಾಜ್ ಅವರನ್ನು. ಮೇಘನಾ ರಾಜ್ ಕನ್ನಡ ಚಿತ್ರರಂಗದ ಹಿರಿಯ ನಟರಾದ ಸುಂದರರಾಜ್ ಹಾಗೂ ಪ್ರಮೀಳಾ ಜೋಷಾಯ್ ಅವರ ಪುತ್ರಿ.

ಚಿತ್ರರಂಗ ಪ್ರವೇಶಿಸಿದ್ದ ಸಹೋದರ ಧ್ರುವ ಸರ್ಜಾ ಕುರಿತು ಅಪಾರ ಪ್ರೀತಿ ಹೊಂದಿದ್ದ ಚಿರಂಜೀವಿ ಸರ್ಜಾ, ಸಂದರ್ಭ ಸಿಕ್ಕಾಗಲೆಲ್ಲಾ ತಮ್ಮನ ಕುರಿತು ಅಭಿಮಾನದ ಮಾತುಗಳನ್ನಾಡುತ್ತಿದ್ದರು. ಇದೀಗ ಚಿರಂಜೀವಿ ಸರ್ಜಾ ನಿಧನದಿಂದಾಗಿ ಇಡೀ ಕುಟುಂಬಕ್ಕೆ ಬರಸಿಡಿಲು ಬಂದೆರಗಿದಂತಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...