ತಮ್ಮ ಮಧುರವಾದ ಕಂಠದಿಂದ ಎಲ್ಲರ ಮನೆ ಮಾತಾಗಿರುವ ಖ್ಯಾತ ಗಾಯಕಿ ಶ್ರೇಯಾ ಘೋಷಾಲ್ ತಾಯಿಯಾಗುತ್ತಿದ್ದು, ಈ ಸಂತಸವನ್ನು ಸಾಮಾಜಿಕ ಜಾಲತಾಣವಾದ ಟ್ವಿಟರ್ ನಲ್ಲಿ ಶೇರ್ ಮಾಡಿದ್ದಾರೆ. ತಮ್ಮ ಫೋಟೋವೊಂದನ್ನು ಟ್ವಿಟ್ಟರ್ ನಲ್ಲಿ ಅಪ್ ಲೋಡ್ ಮಾಡುವ ಮೂಲಕ ಕೆಲ ಸಾಲುಗಳನ್ನು ಬರೆದುಕೊಂಡಿದ್ದಾರೆ.
ಹುಟ್ಟುಹಬ್ಬದ ಸಂಭ್ರಮದಲ್ಲಿ ನಟಿ ಶ್ರದ್ಧಾ ದಾಸ್
ಮಗು ತನ್ನ ಹಾದಿಯಲ್ಲಿದೆ ಈ ಸುದ್ದಿಯನ್ನು ನಿಮ್ಮೆಲ್ಲರೊಂದಿಗೆ ಹಂಚಿಕೊಳ್ಳಲು ನಾನು ಹಾಗೂ ನನ್ನ ಪತಿ ಶಿಲಾದಿತ್ಯ ರೋಮಾಂಚನಗೊಂಡಿದ್ದೇವೆ. ನಮ್ಮ ಜೀವನದ ಈ ಹೊಸ ಅಧ್ಯಾಯಕ್ಕೆ ನಿಮ್ಮೆಲ್ಲರ ಪ್ರೀತಿ ಮತ್ತು ಆಶೀರ್ವಾದ ಇರಲಿ ಎಂದು ಬರೆದುಕೊಂಡಿದ್ದಾರೆ. ಅವರ ಅಭಿಮಾನಿಗಳು ಹಾಗೂ ಸಿನಿ ತಾರೆಯರು ಶ್ರೇಯಾ ಘೋಷಾಲ್ ಅವರಿಗೆ ಶುಭಾಶಯ ತಿಳಿಸಿದ್ದಾರೆ.