
ಬೆಂಗಳೂರು; ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಮಾಫಿಯಾ ನಂಟು ಪ್ರಕರಣ ಸಂಬಂಧ ಬಂಧನದಲ್ಲಿರುವ ನಟಿ ರಾಗಿಣಿ ದ್ವಿವೇದಿ ಅವರನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಮೂರು ದಿನಗಳ ಹಿಂದೆ ನಟಿ ರಾಗಿಣಿ ಅವರನ್ನು ಸಿಸಿಬಿ ವಶಕ್ಕೆ ಪಡೆದಿತ್ತು. ಇಂದು ಸಿಸಿಬಿ ಕಸ್ಟಡಿ ಅವಧಿ ಮುಗಿದ ಹಿನ್ನಲೆಯಲ್ಲಿ ಸಿಸಿಬಿ ಪೊಲೀಸರು ನಟಿಯನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದಾರೆ.
ಈ ವೇಳೆ ಸಿಸಿಬಿ ಪೊಲೀಸರು ನಟಿ ರಾಗಿಣಿ ವಿಚಾರಣೆಗೆ ಸರಿಯಾಗಿ ಸ್ಪಂದಿಸುತ್ತಿಲ್ಲ. ಅವರನ್ನು ಇನ್ನಷ್ಟು ವಿಚಾರಣೆಗೆ ಒಳಪಡಿಸುವ ಅಗತ್ಯವಿದ್ದು, ಇನ್ನಷ್ಟು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ವಹಿಸುವಂತೆ ಕೋರ್ಟ್ ಗೆ ಮನವಿ ಮಾಡಿದ್ದಾರೆ. ಮನವಿ ಮನ್ನಿಸಿದ 1ನೇ ಎಸಿಎಂಎಂ ನ್ಯಾಯಾಲಯ 5 ದಿನಗಳ ಕಾಲ ಸಿಸಿಬಿ ಪೊಲೀಸ್ ಕಸ್ಟಡಿಗೆ ವಹಿಸಿ ಆದೇಶ ನೀಡಿದೆ.