ಚೆನ್ನೈ: ಖ್ಯಾತ ನಟ, ಮಕ್ಕಳ್ ನೀಧಿ ಮಯ್ಯಂ ಪಕ್ಷದ ಮುಖ್ಯಸ್ಥ ಕಮಲ್ ಹಾಸನ್ ಅವರ ಕಾಲಿನ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದು, 4-5 ದಿನಗಳಲ್ಲಿ ಕಮಲ್ ಹಾಸನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ.
ಈ ಹಿಂದೆ ಕಮಲ್ ಹಾಸನ್ ಅವರಿಗೆ ಅಪಘಾತವೊಂದರಲ್ಲಿ ಕಾಲಿಗೆ ಗಾಯವಾಗಿತ್ತು. ಆಗ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆಗಾಗ ನೋವು ಕಾಣಿಸಿಕೊಳ್ಳುತ್ತಿತ್ತು ಎನ್ನಲಾಗಿದೆ. ಈಗ ತಮಿಳುನಾಡು ಚುನಾವಣಾ ಪ್ರಚಾರದಲ್ಲಿ ತೊಡಗಿರುವ ಕಮಲ್ ಗೆ ಮತ್ತೆ ಕಾಲಿನಲ್ಲಿ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ವೈದ್ಯರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸಲಹೆ ನೀಡಿದ್ದರು.
ಇದೀಗ ಕಮಲ್ ಹಾಸನ್ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು, ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.