
ಮಂಸೋರೆ ನಿರ್ದೇಶನದ Act 1978 ಸಿನಿಮಾವನ್ನು ನವೆಂಬರ್ 20 ರಂದು ಬಿಡುಗಡೆ ಮಾಡಲು ನಿರ್ದರಿಸಿದ್ದಾರೆ. ಚಿತ್ರಮಂದಿರದಲ್ಲಿ ರಿಲೀಸ್ ಆಗುತ್ತಿರುವ ದಕ್ಷಿಣ ಭಾರತದ ಮೊದಲ ಹೊಸ ಸಿನಿಮಾ ಇದಾಗಲಿದೆ ಈಗಾಗಲೇ ಈ ಸಿನಿಮಾ, ಟ್ರೈಲರ್ ಮೂಲಕ ಪ್ರೇಕ್ಷಕರಲ್ಲಿ ಸಾಕಷ್ಟು ಕುತೂಹಲ ಹೆಚ್ಚಿಸಿದೆ.
ದೇವರಾಜ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದ್ದು ಯಜ್ಞಾ ಶೆಟ್ಟಿ, ಸಂಚಾರಿ ವಿಜಯ್, ಬಿ. ಸುರೇಶ್, ಶ್ರುತಿ, ಸುಧಾ ಬೆಳವಾಡಿ ಸೇರಿದಂತೆ ಸಾಕಷ್ಟು ಕಲಾವಿದರು ಈ ಚಿತ್ರದಲ್ಲಿ ನಟಿಸಿದ್ದು, ನವೆಂಬರ್ 20ರಂದು ರಿಲೀಸ್ ಮಾಡುತ್ತಿದ್ದಾರೆ ಈ ಕುರಿತು ನಿರ್ದೇಶಕ ಮಂಸೋರೆ ಟ್ವಿಟ್ಟರ್ ನಲ್ಲಿ ತಿಳಿಸಿದ್ದಾರೆ.
