ಬಾಲಿವುಡ್ ನಟ ಸುಶಾಂತ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡು ಎಲ್ಲರಿಗೂ ಶಾಕ್ ನೀಡಿದ್ದಾರೆ. ಇದೇ ನೋವಿನಲ್ಲಿರುವ ಅಭಿಮಾನಿಗಳಿಗೆ ಒಂದು ಸುದ್ದಿಯಿದೆ. ಸುಶಾಂತ್ ಅಭಿನಯಿಸಿದ ಕೊನೆ ಚಿತ್ರ ದಿಲ್ ಬೆಚರಾದ ಟೈಟಲ್ ಟ್ರ್ಯಾಕ್ ಬಿಡುಗಡೆಯಾಗಿದೆ.
ಸುಶಾಂತ್ ಈ ಚಿತ್ರದಲ್ಲಿ ಕೊನೆಯದಾಗಿ ಅಭಿನಯಿಸಿದ್ದರು. ಈ ಚಿತ್ರದಲ್ಲಿ ಸುಶಾಂತ್ ಸಿಂಗ್ ಅವರೊಂದಿಗೆ ಸಂಜನಾ ಸಂಘಿ ಕಾಣಿಸಿಕೊಳ್ಳಲಿದ್ದಾರೆ. ಈ ಚಿತ್ರದ ಟ್ರೈಲರ್ ಮತ್ತು ಮೊದಲ ಹಾಡಿನ ಟೀಸರ್ ನಂತರ, ಇಂದು ಚಿತ್ರದ ಮೊದಲ ಹಾಡು ಬಿಡುಗಡೆಯಾಗಿದೆ.
ಈ ಹಾಡನ್ನು ಎ.ಆರ್.ರೆಹಮಾನ್ ಸಂಯೋಜಿಸಿದ್ದಾರೆ. ಸಾಹಿತ್ಯವನ್ನು ಅಮಿತಾಭ್ ಭಟ್ಟಾಚಾರ್ಯ ಬರೆದಿದ್ದಾರೆ. ಹಾಡಿನಲ್ಲಿ ಸುಶಾಂತ್ ವೇದಿಕೆಯಲ್ಲಿ ಅಬ್ಬರದ ಪ್ರದರ್ಶನ ನೀಡುತ್ತಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಅವರ ಕೊನೆಯ ಚಿತ್ರದ ಮೊದಲ ಹಾಡು ನೋಡಿದ ಜನರ ಕಣ್ಣಲ್ಲಿ ನೀರು ಬರ್ತಿದೆ.