
ನಿರೂಪ್ ಭಂಡಾರಿ ಅಭಿನಯದ ‘ವಿಂಡೋ ಸೀಟ್’ ಸಿನಿಮಾದ ಟೀಸರ್ ಅನ್ನು ಇದೇ ತಿಂಗಳು ನವೆಂಬರ್ 13ರಂದು ಬಿಡುಗಡೆ ಮಾಡಲಿದ್ದಾರೆ. ಈ ಚಿತ್ರವನ್ನು ಶೀತಲ್ ಶೆಟ್ಟಿ ನಿರ್ದೇಶಿಸಿದ್ದು, ಜಾಕ್ ಮಂಜು ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.
ಸಂಜನಾ ಆನಂದ್ ಹಾಗೂ ಅಮೃತಾ ಅಯ್ಯಂಗಾರ್ ನಾಯಕಿಯರಾಗಿ ಅಭಿನಯಿಸಿದ್ದು, ಇತ್ತೀಚಿಗಷ್ಟೆ ಸಿನಿಮಾದ ಫಸ್ಟ್ ಲುಕ್ ಬಿಡುಗಡೆ ಮಾಡಿದ್ದರು.
ಈ ಸಿನಿಮಾ ಬಗ್ಗೆ ಪ್ರೇಕ್ಷಕರಿಗೆ ಈಗಾಗಲೇ ಕುತೂಹಲ ಹೆಚ್ಚಿಸಿದ್ದು ಇದೀಗ ಟೀಸರ್ ಅನ್ನು ನವೆಂಬರ್ 13ಕ್ಕೆ ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
