‘ಯಜಮಾನ’ ಸಿನಿಮಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರೊಂದಿಗೆ ‘ಬಸಣ್ಣಿ ಬಾ’ ಹಾಡಿಗೆ ಹೆಜ್ಜೆ ಹಾಕಿ ಪಡ್ಡೆ ಹುಡುಗರ ನಿದ್ದೆಗೆಡೆಸಿದ್ದ ನಟಿ ತಾನ್ಯಾ ಹೋಪ್ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸಕ್ರಿಯರಾಗಿರುತ್ತಾರೆ. ತಮ್ಮ ಹಾಟ್ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುತ್ತಿರುತ್ತಾರೆ.
ಇದೀಗ ತಾನ್ಯಾ ಹೋಪ್ ತಮ್ಮ ಹೊಸ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಈ ಫೋಟೋಗಳನ್ನು ನೋಡಿದ ಪಡ್ಡೆ ಹುಡುಗರ ಎದೆ ಝಲ್ ಎನ್ನಿಸುತ್ತಿದೆ. ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳ ಸುರಿಮಳೆಯೇ ಹರಿದು ಬಂದಿವೆ.