ಕಲಬುರ್ಗಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಬಹುನಿರೀಕ್ಷಿತ ಚಿತ್ರ ‘ಯುವರತ್ನ’ ಸಿನಿಮಾ ಏಪ್ರಿಲ್ 1ರಂದು ಬಿಡುಗಡೆಯಾಗಲಿದ್ದು, ಚಿತ್ರದ ಪ್ರಚಾರಕ್ಕಾಗಿ ಚಿತ್ರ ತಂಡ ಇದೀಗ ಕಲಬುರ್ಗಿಯಲ್ಲಿ ಬೀಡುಬಿಟ್ಟಿದೆ. ಈ ನಡುವೆ ತಮ್ಮ ನೆಚ್ಚಿನ ನಟನನ್ನು ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ.
ಯುವರತ್ನ ಸಿನಿಮಾ ಪ್ರಚಾರಕ್ಕಾಗಿ ಯುವ ಸಂಭ್ರಮ ಹಮ್ಮಿಕೊಂಡಿದ್ದು, ಇದರ ಮೊದಲ ಭಾಗವಾಗಿ ಚಿತ್ರತಂಡ ಕಲಬುರ್ಗಿ ಜಿಲ್ಲೆ ತಲುಪಿದೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ನಿರ್ದೇಶಕ ಸಂತೋಷ್ ಆನಂದ್ ರಾಮ್, ನಟರಾದ ಡಾಲಿ ಧನಂಜಯ್, ರವಿಶಂಕರ್ ಕಲಬುರ್ಗಿಗೆ ಭೇಟಿ ನೀಡಿದ್ದಾರೆ.
ಈ ಹಿನ್ನೆಲೆಯಲ್ಲಿ ಪವರ್ ಸ್ಟಾರ್ ನೋಡಲು ಅಭಿಮಾನಿಗಳು ಮುಗಿಬಿದ್ದಿದ್ದಾರೆ. ಕೊರೊನಾ ಭೀತಿ ನಡುವೆಯೂ ಮಾಸ್ಕ್, ಸಾಮಾಜಿಕ ಅಂತರ ಮರೆತು ನೆಚ್ಚಿನ ನಟನನ್ನು ಕಣ್ತುಂಬಿಕೊಳ್ಳಲು ಆಗಮಿಸಿದ ಅಭಿಮಾನಿಗಳನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟಿದ್ದಾರೆ.
ಕಂಬಳದ ವೇಗದ ವೀರ ಶ್ರೀನಿವಾಸ ಗೌಡರಿಂದ ಮತ್ತೊಂದು ಹೊಸ ದಾಖಲೆ
ಎಷ್ಟೇ ಸೂಚನೆ ನೀಡಿದರೂ ಅಭಿಮಾನಿಗಳು ಕೊರೊನಾ ನಿಯಮಗಳನ್ನು ಗಾಳಿಗೆ ತೂರಿದ್ದಾರೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿರುವ ಘಟನೆ ನಡೆದಿದೆ.