ಸಂತೋಷ್ ಆನಂದ್ ರಾಮ್ ನಿರ್ದೇಶನದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ‘ಯುವರತ್ನ’ ಚಿತ್ರದ ‘ಪವರ್ ಆಫ್ ಯೂತ್’ ಎಂಬ ಪ್ರೋಮೊವನ್ನು ಹೊಂಬಾಳೆ ಫಿಲಂಸ್ ನ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಮಾಡಿದ್ದಾರೆ.
ಈ ಪ್ರೋಮೋ ಸಾಕಷ್ಟು ವೀವ್ಸ್ ಪಡೆದುಕೊಂಡಿದ್ದು ಇದಕ್ಕೆ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆಗಳು ದೊರೆತಿವೆ.
ಈ ಚಿತ್ರಕ್ಕೆ ವಿಜಯ್ ಕಿರಗಂದೂರು ಬಂಡವಾಳ ಹೂಡಿದ್ದು ಸಾಯೆಷಾ ನಾಯಕಿಯಾಗಿ ಅಭಿನಯಿಸಿದ್ದಾರೆ. ಪ್ರೋಮೋ ಮೂಲಕ ಪುನೀತ್ ರಾಜ್ ಕುಮಾರ್ ಅಭಿಮಾನಿಗಳಲ್ಲಿ ಸಿನಿಮಾ ಬಗ್ಗೆ ಇನ್ನಷ್ಟು ಕುತೂಹಲ ಹೆಚ್ಚಿಸಿದೆ.