
ಹುಣಸೂರು ಕೃಷ್ಣಮೂರ್ತಿ ನಿರ್ದೇಶನದ ಡಾ. ರಾಜ್ ಕುಮಾರ್ ಅಭಿನಯದ ‘ಬಬ್ರುವಾಹನ’ ಚಿತ್ರದ ಡೈಲಾಗ್ ಅನ್ನು ಆಕಾಶ್ ಭಟ್ ಎಂಬ ಚಿಕ್ಕ ಹುಡುಗನೊಬ್ಬ ತುಂಬಾ ಸೊಗಸಾಗಿ ಹೇಳಿದ್ದಾನೆ.
ಈ ವಿಡಿಯೋ ನೋಡಿ ಪುನೀತ್ ರಾಜ್ ಕುಮಾರ್ ಅವರಿಗೆ ಸಂತಸವಾಗಿದ್ದು, ಇದನ್ನು ಪವರ್ ಸ್ಟಾರ್ ಪುನೀತ್ ಕುಮಾರ್ ತಮ್ಮ ಟ್ವಿಟ್ಟರ್ ನಲ್ಲಿ ಹಂಚಿಕೊಂಡಿದ್ದಾರೆ.
ಪುಟ್ಟ ಅಭಿಮಾನಿ ಎಂದು ತಮ್ಮ ಟ್ವಿಟ್ಟರ್ ನಲ್ಲಿ ಪುನೀತ್ ರಾಜ್ ಕುಮಾರ್ ಬರೆದುಕೊಂಡಿದ್ದು, ಇದಕ್ಕೆ ಸಾಕಷ್ಟು ಲೈಕ್ಸ್ ಗಳು ಹಾಗೂ ಕಮೆಂಟ್ಸ್ ಗಳು ಬಂದಿವೆ.