ಪ್ರೇಮ್ ನಿರ್ದೇಶನದ ‘ಏಕ್ ಲವ್ ಯಾ’ ಚಿತ್ರವನ್ನು ನಾಲ್ಕು ಭಾಷೆಯಲ್ಲಿ ರಿಲೀಸ್ ಮಾಡಲು ನಿರ್ದರಿಸಿದ್ದು, ಈ ಸಿನಿಮಾದ ಮೊದಲ ಹಾಡನ್ನು ಪ್ರೇಮಿಗಳ ದಿನದಂದು ಬಿಡುಗಡೆ ಮಾಡಲಿದ್ದಾರೆ. ಕನ್ನಡ, ತಮಿಳು, ತೆಲುಗು ಹಾಗೂ ಮಲಯಾಳಂ ಭಾಷೆಗಳಲ್ಲಿ ಚಿತ್ರ ತೆರೆಕಾಣಲಿದೆ.
ಈ ಚಿತ್ರದಲ್ಲಿ ರಕ್ಷಿತಾ ಅವರ ಸಹೋದರ ರಾಣಾ ನಾಯಕನಾಗಿ ನಟಿಸಿದ್ದು, ರಿಷಾ ಹಾಗೂ ರಚಿತಾ ರಾಮ್ ನಾಯಕಿಯಾಗಿ ಅಭಿನಯಿಸಿದ್ದಾರೆ. ಫೆಬ್ರವರಿ 14ರಂದು ಈ ಸಿನಿಮಾ ಹಾಡೊಂದನ್ನು ರಿಲೀಸ್ ಮಾಡಲು ಚಿತ್ರತಂಡ ಸಜ್ಜಾಗಿದೆ.