ಬೆಂಗಳೂರು: ಟಾಲಿವುಡ್ ಚಿತ್ರರಂಗದ ಹೊಸ ನೀತಿ ವಿರುದ್ಧ ಸಿಡಿದೆದ್ದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಫಿಲ್ಮ್ ಚೇಂಬರ್ ಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಈ ವೇಳೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.
ತೆಲುಗಿನಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಆಗುತ್ತಿರುವ ಅಡ್ದಿಯನ್ನು ಸರಿಪಡಿಸಬೇಕು. ಕರ್ನಾಟಕದಲ್ಲಿ ತೆಲುಗು ಚಿತ್ರಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡಿದಂತೆಯೆ ಅಲ್ಲಿಯೂ ನಮ್ಮ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.
ಕೆಜಿಎಫ್-2 ರಿಲೀಸ್ ಗೆ ಇಂದು ಮುಹೂರ್ತ ಫಿಕ್ಸ್
ʼರಾಬರ್ಟ್ʼ ಚಿತ್ರ ತೆಲುಗಿನಲ್ಲಿ ಬಿಡುಗಡೆಗೆ ಸಮಸ್ಯೆಯಾಗಬಾರದು. ಈ ಬಗ್ಗೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಗೂ ತಿಳಿಸಬೇಕು. ಈಗಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಮುಂದೆ ಮತ್ತಷ್ಟು ತೊಂದರೆಯಾಗಲಿದೆ. ಯುವ ಪ್ರತಿಭೆಗಳ ಸಿನಿಮಾಗಳಿಗೂ ತೊಂದರೆಯಾಗಲಿದೆ ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಟಾಲಿವುಡ್ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆಯೂ ಚರ್ಚಿಸುವಂತೆ ತಿಳಿಸಿದ್ದಾರೆ.