alex Certify ಫಿಲ್ಮ್ ಚೇಂಬರ್ ಮುಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ ಮನವಿಗಳೇನು….? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಫಿಲ್ಮ್ ಚೇಂಬರ್ ಮುಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಾಡಿದ ಮನವಿಗಳೇನು….?

ಬೆಂಗಳೂರು: ಟಾಲಿವುಡ್ ಚಿತ್ರರಂಗದ ಹೊಸ ನೀತಿ ವಿರುದ್ಧ ಸಿಡಿದೆದ್ದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್, ಫಿಲ್ಮ್ ಚೇಂಬರ್ ಗೆ ಭೇಟಿ ನೀಡಿ ದೂರು ನೀಡಿದ್ದಾರೆ. ಈ ವೇಳೆ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ.

ತೆಲುಗಿನಲ್ಲಿ ಕನ್ನಡ ಚಿತ್ರಗಳ ಬಿಡುಗಡೆಗೆ ಆಗುತ್ತಿರುವ ಅಡ್ದಿಯನ್ನು ಸರಿಪಡಿಸಬೇಕು. ಕರ್ನಾಟಕದಲ್ಲಿ ತೆಲುಗು ಚಿತ್ರಗಳನ್ನು ಬಿಡುಗಡೆ ಮಾಡಲು ಅವಕಾಶ ನೀಡಿದಂತೆಯೆ ಅಲ್ಲಿಯೂ ನಮ್ಮ ಚಿತ್ರಗಳ ಬಿಡುಗಡೆಗೆ ಅವಕಾಶ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಕೆಜಿಎಫ್-2 ರಿಲೀಸ್ ಗೆ ಇಂದು ಮುಹೂರ್ತ ಫಿಕ್ಸ್

ʼರಾಬರ್ಟ್ʼ ಚಿತ್ರ ತೆಲುಗಿನಲ್ಲಿ ಬಿಡುಗಡೆಗೆ ಸಮಸ್ಯೆಯಾಗಬಾರದು. ಈ ಬಗ್ಗೆ ತೆಲುಗು ಚಲನಚಿತ್ರ ವಾಣಿಜ್ಯ ಮಂಡಳಿಗೂ ತಿಳಿಸಬೇಕು. ಈಗಲೇ ಸಮಸ್ಯೆಗಳನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಮುಂದೆ ಮತ್ತಷ್ಟು ತೊಂದರೆಯಾಗಲಿದೆ. ಯುವ ಪ್ರತಿಭೆಗಳ ಸಿನಿಮಾಗಳಿಗೂ ತೊಂದರೆಯಾಗಲಿದೆ ಈ ಎಲ್ಲಾ ವಿಚಾರಗಳನ್ನು ಗಮನದಲ್ಲಿಟ್ಟುಕೊಂಡು ಟಾಲಿವುಡ್ ಚಲನಚಿತ್ರ ವಾಣಿಜ್ಯ ಮಂಡಳಿ ಜೊತೆಯೂ ಚರ್ಚಿಸುವಂತೆ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...