
ಫೆಬ್ರವರಿ 19ರಂದು ಬಿಡುಗಡೆಗೆ ಸಜ್ಜಾಗಿರುವ ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ನಟನೆಯ ‘ಪೊಗರು’ ಸಿನಿಮಾದ ಧ್ವನಿಸುರುಳಿ ಬಿಡುಗಡೆ ಕಾರ್ಯಕ್ರಮವನ್ನು ಇದೇ ತಿಂಗಳು ಫೆಬ್ರವರಿ 14 ಪ್ರೇಮಿಗಳ ದಿನದಂದು ಬೆಣ್ಣೆ ನಗರಿ ದಾವಣಗೆರೆಯಲ್ಲಿ ನೆರವೇರಿಸಲಿದ್ದಾರೆ. ಈ ಕುರಿತು ಧ್ರುವ ಸರ್ಜಾ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.
ಇನ್ಸ್ಟಾಗ್ರಾಮ್ ನಲ್ಲಿ 15 ಮಿಲಿಯನ್ ಫಾಲೋವರ್ಸ್ ಪಡೆದ ಸಮಂತಾ ಅಕ್ಕಿನೇನಿ
ನಂದಕಿಶೋರ್ ಆಕ್ಷನ್ ಕಟ್ ಹೇಳಿರುವ ಈ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದು, ಬಿ.ಕೆ. ಗಂಗಾಧರ್ ನಿರ್ಮಾಣ ಮಾಡಿದ್ದಾರೆ. ಕನ್ನಡ ಸೇರಿದಂತೆ ತೆಲುಗು ಹಾಗೂ ತಮಿಳಿನಲ್ಲಿ ಈ ಚಿತ್ರ ತೆರೆ ಮೇಲೆ ಬರಲಿದೆ