ಮುಂಬೈ: ಬಾಲಿವುಡ್ ನಲ್ಲಿ ಡ್ರಗ್ಸ್ ಪ್ರಕರಣ ದಿನದಿಂದ ದಿನಕ್ಕೆ ಕುತೂಹಲ ಪಡೆದುಕೊಳ್ಳುತ್ತಿದ್ದು, ಪ್ರಕರಣ ಸಂಬಂಧ ನಟಿಯರಾದ ದೀಪಿಕಾ ಪಡುಕೋಣೆ, ಶ್ರದ್ಧಾ ಕಪೂರ್, ಸಾರಾ ಅಲಿಖಾನ್ ಹಾಗೂ ರಕುಲ್ ಪ್ರೀತ್ ಸಿಂಗ್ ಅವರ ಮೊಬೈಲ್ ಗಳನ್ನು ಎನ್ ಸಿಬಿ ವಶಕ್ಕೆ ಪಡೆದಿದೆ.
ಡ್ರಗ್ಸ್ ಪ್ರಕರಣ ಸಂಬಂಧ ನೊಟೀಸ್ ಹಿನ್ನೆಲೆಯಲ್ಲಿ ನಿನ್ನೆ ವಿಚಾರಣೆಗೆ ಹಾಜರಾಗಿದ್ದ ನಟಿ ದೀಪಿಕಾ ಪಡುಕೋಣೆ ಮೊಬೈಲನ್ನು ಪಡೆದು ಪರಿಶೀಲನೆ ನಡೆಸಿದ ಅಧಿಕಾರಿಗಳು ವಾಪಸ್ ನೀಡಿದ್ದಾರೆ ಎನ್ನಲಾಗಿತ್ತು. ಆದರೆ ಮೊಬೈಲ್ ವಾಪಸ್ ನೀಡಿಲ್ಲ ಎಂದು ತಿಳಿದುಬಂದಿದೆ.
ವಿಚಾರಣೆ ವೇಳೆ ದೀಪಿಕಾ ಅಧಿಕಾರಿಗಳ ಪ್ರಶ್ನೆಗಳಿಗೆ ಸರಿಯಾಗಿ ಉತ್ತರ ನೀಡಿಲ್ಲ. ಹೀಗಾಗಿ ಅವರ ಮೊಬೈಲ್ ನ್ನು ವಶಕ್ಕೆ ಪಡೆದುಕೊಂಡು ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದಾರೆ.
ಇನ್ನು ಎನ್ ಸಿಬಿ ವಿಚಾರಣೆ ವೇಳೆ ನಟಿಯರಾದ ಶ್ರದ್ಧಾ ಕಪೂರ್, ಸಾರಾ ಅಲಿಖಾನ್, ರಾಕುಲ್ ಹಾಗೂ ಕರೀಷ್ಮಾ, ಜಯಾ ಸಾಹಾ ಅವರ ಮೊಬೈಲ್ ಕೂಡ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಸ್ಪಷ್ಟಪಡಿಸಿದೆ. ಈ ಹಿನ್ನಲೆಯಲ್ಲಿ ನಟಿಮಣಿಯರ ಸಂಪರ್ಕದಲ್ಲಿರುವ ಇನ್ನಷ್ಟು ಜನರಿಗೆ ಆತಂಕ ಎದುರಾಗಿದೆ.