ಮುಂಬೈ: ದೇಶಾದ್ಯಂತ ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಇದೀಗ ಬಾಲಿವುಡ್ ನಟಿ ಆಲಿಯಾ ಭಟ್ ಗೂ ಕೊರೊನಾ ಸೋಂಕು ದೃಢಪಟ್ಟಿದೆ. ಈ ಕುರಿತು ಸ್ವತ: ಆಲಿಯಾ ತಿಳಿಸಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಮಾಹಿತಿ ನೀಡಿರುವ ಆಲಿಯಾ ಭಟ್, ತಮಗೆ ಕೊರೊನಾ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಹೋಮ್ ಐಸೋಲೇಷನ್ ನಲ್ಲಿದ್ದೇನೆ. ಕೊರೊನಾ ಕುರಿತು ಎಲ್ಲಾ ಸುರಕ್ಷತಾ ಕ್ರಮಗಳನ್ನು ಅನುಸರಿಸುವುದಾಗಿ ತಿಳಿಸಿದ್ದಾರೆ.
ಏಪ್ರಿಲ್ 9ರಂದು ತೆರೆಮೇಲೆ ಬರಲಿದೆ ‘ಕೊಡೆಮುರುಗ’
ಇತ್ತೀಚೆಗೆ ನನ್ನ ಸಂಪರ್ಕದಲ್ಲಿರುವ ಎಲ್ಲರೂ ತಕ್ಷಣ ಕೋವಿಡ್ ಪರೀಕ್ಷೆಗೆ ಒಳಗಾಗುವಂತೆ ಆಲಿಯಾ ಮನವಿ ಮಾಡಿದ್ದಾರೆ.