alex Certify ಬಿಗ್‌ ನ್ಯೂಸ್:‌ ಖ್ಯಾತ ಸಂಗೀತ ನಿರ್ದೇಶಕ ರಾಜನ್‌ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್‌ ನ್ಯೂಸ್:‌ ಖ್ಯಾತ ಸಂಗೀತ ನಿರ್ದೇಶಕ ರಾಜನ್‌ ಇನ್ನಿಲ್ಲ

ಖ್ಯಾತ ಸಂಗೀತ ನಿರ್ದೇಶಕ ರಾಜನ್‌ ವಿಧಿವಶರಾಗಿದ್ದಾರೆ. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ 87 ವರ್ಷದ ರಾಜನ್‌ ಬೆಂಗಳೂರಿನ ಆರ್.‌ಟಿ. ನಗರದಲ್ಲಿರುವ ಅವರ ನಿವಾಸದಲ್ಲಿಯೇ ಕೊನೆಯುಸಿರೆಳೆದಿದ್ದಾರೆ.

ಸಹೋದರ ನಾಗೇಂದ್ರ ಜೊತೆ ಸೇರಿ ಕನ್ನಡ, ತಮಿಳು, ತೆಲುಗು ಮೊದಲಾದ ಭಾಷೆಗಳ ಚಲನಚಿತ್ರಗಳಿಗೆ ರಾಜನ್‌ ಸಂಗೀತ ನೀಡಿದ್ದರು. ಎರಡು ಕನಸು, ಪರಸಂಗದ ಗೆಂಡೆತಿಮ್ಮ, ಬಯಲು ದಾರಿ, ಗಂಧದ ಗುಡಿ ಮೊದಲಾದವು ರಾಜನ್‌ – ನಾಗೇಂದ್ರ ಸಂಗೀತ ನಿರ್ದೇಶನದಲ್ಲಿ ಮೂಡಿಬಂದ ಚಿತ್ರಗಳು.

ಪುತ್ರ-ಪುತ್ರಿಯನ್ನು ಅಗಲಿರುವ ರಾಜನ್‌ ಅವರ ಅಂತ್ಯಕ್ರಿಯೆ ಇಂದು ಬೆಂಗಳೂರಿನ ಹೆಬ್ಬಾಳದಲ್ಲಿರುವ ಸ್ಮಶಾನದಲ್ಲಿ ನೆರವೇರಲಿದೆ. ರಾಜನ್‌ ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...