
ಬಾಲಿವುಡ್ ನಟಿ ಐಶ್ವರ್ಯಾ ರೈ ಬಚ್ಚನ್ ಮತ್ತು ಅವರ ಪುತ್ರಿ ಆರಾಧ್ಯ ಬಚ್ಚನ್ ಕೊರೊನಾ ಗೆದ್ದು ಬಂದಿದ್ದಾರೆ. ಕೊರೊನಾ ಸೋಂಕಿಗೊಳಗಾಗಿದ್ದ ಐಶ್ವರ್ಯ ಹಾಗೂ ಆರಾಧ್ಯ ನಾನಾವತಿ ಆಸ್ಪತ್ರೆಗೆ ದಾಖಲಾಗಿದ್ದರು. ಈಗ ಸೋಂಕು ಕಡಿಮೆಯಾದ ಕಾರಣ ಆಸ್ಪತ್ರೆಯಿಂದ ಮನೆಗೆ ವಾಪಸ್ ಆಗಿದ್ದಾರೆ.
ಸೂಪರ್‌ಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ಅವರ ಮಗ ಅಭಿಷೇಕ್ ಬಚ್ಚನ್ ಅವರಿಗೆ ಮೊದಲು ಕೊರೊನಾ ಕಾಣಿಸಿಕೊಂಡಿತ್ತು. ಜುಲೈ 11ರಂದು ಕೋವಿಡ್ -19 ಸೋಂಕಿಗೆ ಒಳಗಾಗಿರುವುದಾಗಿ ಹೇಳಿದ್ದರು. ನಂತ್ರ ಜುಲೈ 12ರಂದು ಐಶ್ವರ್ಯ ಹಾಗೂ ಆರಾಧ್ಯಗೆ ಸೋಂಕಿರುವುದು ಪತ್ತೆಯಾಗಿತ್ತು.
ಮೊದಲು ಇಬ್ಬರಿಗೂ ಕೊರೊನಾ ಲಕ್ಷಣಗಳು ಇರದ ಕಾರಣ ಮನೆಯಲ್ಲಿಯೇ ಚಿಕಿತ್ಸೆ ನೀಡಲಾಗ್ತಿತ್ತು. ನಂತ್ರ ಇಬ್ಬರು ಆಸ್ಪತ್ರೆಗೆ ದಾಖಲಾಗಿದ್ದರು.