alex Certify ಬಿಗ್ ನ್ಯೂಸ್: ಚಿರಂಜೀವಿ ಸರ್ಜಾ ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಬಿಗ್ ನ್ಯೂಸ್: ಚಿರಂಜೀವಿ ಸರ್ಜಾ ಅವರ ಕೊರೊನಾ ಪರೀಕ್ಷಾ ವರದಿ ನೆಗೆಟಿವ್

ಕನ್ನಡ ಚಿತ್ರರಂಗದ ಖ್ಯಾತ ನಟ ಚಿರಂಜೀವಿ ಸರ್ಜಾ ಇಂದು ಮಧ್ಯಾಹ್ನ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಕೊರೊನಾ ಅಟ್ಟಹಾಸ ನಡೆಸುತ್ತಿರುವ ಈ ಸಂದರ್ಭದಲ್ಲಿ ಚಿರಂಜೀವಿ ಸರ್ಜಾ ಅವರ ಸಾವು ಊಹಾಪೋಹಗಳಿಗೆ ಕಾರಣವಾಗಿತ್ತು.

ಉಸಿರಾಟದ ತೊಂದರೆಯಿಂದಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದ ಕಾರಣ ಕೊರೊನಾ ಸೋಂಕು ತಗುಲಿರಬಹುದೆಂಬ ಊಹಾಪೋಹ ಹರಡಿತ್ತು. ಹೀಗಾಗಿ ಚಿರಂಜೀವಿ ಸರ್ಜಾ ಅವರ ಗಂಟಲು ದ್ರವವನ್ನು ಪರೀಕ್ಷೆಗಾಗಿ ಸಂಗ್ರಹಿಸಲಾಗಿತ್ತು.

ಇದೀಗ ಗಂಟಲು ದ್ರವ ಪರೀಕ್ಷಾ ವರದಿ ಹೊರಬಿದ್ದಿದ್ದು, ಚಿರಂಜೀವಿ ಸರ್ಜಾ ಅವರಿಗೆ ಕೊರೊನಾ ಸೋಂಕು ತಗುಲಿರಲಿಲ್ಲವೆಂದು ತಿಳಿದುಬಂದಿದೆ. ತೀವ್ರ ಹೃದಯಾಘಾತದಿಂದ ಚಿರಂಜೀವಿ ಸರ್ಜಾ ಮೃತಪಟ್ಟಿದ್ದಾರೆಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...