ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಜಾಲದ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಗೆ ಸಿಸಿಬಿ ಶಾಕ್ ನೀಡಿದ್ದು, ಸಿಸಿಬಿ ಪೊಲೀಸರು ಒಬೆರಾಯ್ ನಿವಾಸದ ಮೇಲೆ ದಾಳಿ ನಡೆಸಿದ್ದಾರೆ.
ಡ್ರಗ್ಸ್ ಪ್ರಕರಣದ ಆರೋಪಿ ಆದಿತ್ಯ ಆಳ್ವಾ ತಲೆಮರೆಸಿಕೊಂಡಿದ್ದು, ಆತನನ್ನು ವಿಚಾರಣೆಗೆ ಒಳಪಡಿಸುವ ನಿಟ್ಟಿನಲ್ಲಿ ಬೆಂಗಳೂರು ಸಿಸಿಬಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಆದರೆ ಆದಿತ್ಯ ಆಳ್ವಾ ಪತ್ತೆಯಾಗಿಲ್ಲ. ಆರೋಪಿ ಆದಿತ್ಯ ಆಳ್ವಾ, ನಟ ವಿವೇಕ್ ಒಬೆರಾಯ್ ಪತ್ನಿಯ ಸಹೋದರನಾಗಿರುವ ಹಿನ್ನೆಲೆಯಲ್ಲಿ ವಿವೇಕ್ ಆತನಿಗೆ ಆಶ್ರಯ ನೀಡಿರುವ ಸಾಧ್ಯತೆ ದಟ್ಟವಾಗಿದೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಆದಿತ್ಯ ಆಳ್ವನ ಪತ್ತೆಗಾಗಿ ಸಿಸಿಬಿ ಪೊಲೀಸರು ಕೋರ್ಟ್ ನಿಂದ ಸರ್ಚ್ ವಾರೆಂಟ್ ಪಡೆದು, ವಿವೇಕ್ ಒಬೆರಾಯ್ ಮನೆ ಮೇಲೆ ದಾಳಿ ನಡೆಸಿ, ಶೋಧ ನಡೆಸಿದ್ದಾರೆ.