
ಜೀಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ನಯನಾ ಇತ್ತೀಚೆಗೆ ಸಿನಿಮಾಗಳಲ್ಲೂ ಮಿಂಚಿದ್ದಾರೆ.
ಇದೀಗ ನಯನಾ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಎಡೆಯೂರು ಶ್ರೀ ಸಿದ್ದಲಿಂಗೇಶ್ವರ ಧಾರಾವಾಹಿಯಲ್ಲಿ ಅಭಿನಯಿಸಲು ಸಜ್ಜಾಗಿದ್ದಾರೆ.
ಭಕ್ತಿ ಪ್ರಧಾನ ಧಾರಾವಾಹಿ ಇದಾಗಿದ್ದು ಸ್ಟಾರ್ ಸುವರ್ಣ ಚಾನೆಲ್ ನಲ್ಲಿ ಡಿ. 21 ರಿಂದ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ. ಮಹಾ ಶರಣ ಎಡೆಯೂರು ಶ್ರೀ ಸಿದ್ದಲಿಂಗೇಶ್ವರರ ಬದುಕು ಹಾಗೂ ಆಧ್ಯಾತ್ಮ ಸಾರುವ ಹೊಸ ಧಾರಾವಾಹಿ ನವೀನ್ ಕೃಷ್ಣ ನಿರ್ದೇಶನದಲ್ಲಿ ಮೂಡಿ ಬರುತ್ತಿದೆ.
https://www.instagram.com/p/CJD1I7inmd0/?utm_source=ig_embed