
ಪವನ್ ಸಿಂಗ್ ನಟನೆಯ ಪ್ರೇಮಾಂಶು ಸಿಂಗ್ ನಿರ್ದೇಶನದ ಭೋಜ್ ಪುರಿ ಸಿನಿಮಾವೊಂದರಲ್ಲಿ ಸ್ಯಾಂಡಲ್ ವುಡ್ ನಟಿ ಹರ್ಷಿಕಾ ಪೂಣಚ್ಚ ಅಭಿನಯಿಸುತ್ತಿದ್ದಾರೆ.
ಕೊಡಗಿನ ಬೆಡಗಿ ಹರ್ಷಿಕಾ ಪೂಣಚ್ಚ ಈಗಾಗಲೇ ಸಾಕಷ್ಟು ಭಾಷೆಗಳಲ್ಲಿ ನಟಿಸಿದ್ದು, ಇದೀಗ ಭೋಜ್ಪುರಿ ಚಿತ್ರರಂಗಕ್ಕೆ ಪ್ರವೇಶ ಮಾಡಿದ್ದಾರೆ.
ಈಗಾಗಲೇ ಲಂಡನ್ ನಲ್ಲಿ ಈ ಚಿತ್ರದ ಶೂಟಿಂಗ್ ನಡೆಯುತ್ತಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರ್ಷಿಕಾ ಪೂಣಚ್ಚ ಈ ಕುರಿತು ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಈ ಚಿತ್ರವನ್ನು ಅಭಯ್ ಸಿನ್ಹಾ ನಿರ್ಮಾಣ ಮಾಡುತ್ತಿದ್ದು, ಹರ್ಷಿಕಾ ಪೂಣಚ್ಚ ಭೋಜ್ಪುರಿಯಲ್ಲಿ ಮಿಂಚಲು ಸಜ್ಜಾಗಿದ್ದಾರೆ.

